
ರಾಹುಲ್ ಗಾಂಧಿಗೆ ರಾಯ್‌ಬರೇಲಿ ಕೋರ್ಟ್‌ನಿಂದ ಸಮನ್ಸ್
ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಸುಧೀರ್ ಕುಮಾರ್ ಶನಿವಾರ ರಾಹುಲ್ ಗಾಂಧಿಗೆ ಸಮನ್ಸ್ ನೀಡಿದ್ದಾರೆ. ಅಖಿಲ ಭಾರತ ಹಿಂದೂ ಮಹಾಸಂಘ ಸಂಘಟನೆಯ ಮಂಡಲ ಅಧ್ಯಕ್ಷ ಪಂಕಜ್ ಪಾಠಕ್ ಸಲ್ಲಿಸಿದ ಅರ್ಜಿಗೆ ಸಂಬಂಧಿಸಿದಂತೆ ಸಮನ್ಸ್ ಜಾರಿ ಮಾಡಲಾಗಿದೆ.
ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಆರ್ಥಿಕ ಸಮೀಕ್ಷೆಗೆ ಸಂಬಂಧಿಸಿದ ಹೇಳಿಕೆ ನೀಡಿರುವ ಬಗ್ಗೆ ದಾಖಲಾಸದ ಪ್ರಕರಣದಲ್ಲಿ ಕಾಂಗ್ರೆಸ್ ಸಂಸದ ಹಾಗೂ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಇಲ್ಲಿನ ನ್ಯಾಯಾಲಯವು ಜನವರಿ 7ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ.
ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಸುಧೀರ್ ಕುಮಾರ್ ಶನಿವಾರ ರಾಹುಲ್ ಗಾಂಧಿಗೆ ಸಮನ್ಸ್ ನೀಡಿದ್ದಾರೆ. ಅಖಿಲ ಭಾರತ ಹಿಂದೂ ಮಹಾಸಂಘ ಸಂಘಟನೆಯ ಮಂಡಲ ಅಧ್ಯಕ್ಷ ಪಂಕಜ್ ಪಾಠಕ್ ಸಲ್ಲಿಸಿದ ಅರ್ಜಿಗೆ ಸಂಬಂಧಿಸಿದಂತೆ ಸಮನ್ಸ್ ಜಾರಿ ಮಾಡಲಾಗಿದೆ.
ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಿಸುವಂತೆ ಕೋರಿ ಪಾಠಕ್ ಆಗಸ್ಟ್‌ನ;ಲ್ಲಿ ಸಿಜೆಎಂ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಆಗಸ್ಟ್ 27ರಂದು ನ್ಯಾಯಾಲಯ ಈ ಅರ್ಜಿಯನ್ನು ತಿರಸ್ಕರಿಸಿತ್ತು. ನಂತರ ಪಾಠಕ್ ಸೆಷನ್ಸ್ ನ್ಯಾಯಾಲಯದಲ್ಲಿ ಪರಿಶೀಲನಾ ಅರ್ಜಿ ಸಲ್ಲಿಸಿದರು, ಆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.
ಪಾಠಕ್ ಅವರನ್ನು ಪ್ರತಿನಿಧಿಸುವ ವಕೀಲ ವೀರೇಂದ್ರ ಪಾಲ್ ಗುಪ್ತಾ, ಲೋಕಸಭಾ ಚುನಾವಣೆಯ ಸಮಯದಲ್ಲಿ ರಾಹುಲ್ ಗಾಂಧಿ ಅವರು "ದುರ್ಬಲ ವರ್ಗಗಳ ಶೇಕಡಾವಾರು ಹೆಚ್ಚಾಗಿದ್ದರೂ, ಅವರು ಹೊಂದಿರುವ ಆಸ್ತಿಯ ಶೇಕಡಾವಾರು ತುಂಬಾ ಕಡಿಮೆ" ಎಂದು ಹೇಳಿದ್ದರು. ಇದು ಹೀಗೆಯೇ ಮುಂದುವರಿದರೆ, ಹೆಚ್ಚಿನ ಜನಸಂಖ್ಯೆಯನ್ನು ಹೊಂದಿರುವವರು ಹೆಚ್ಚಿನ ಆಸ್ತಿ ಕೇಳಬಹುದು ". ಎಂದಿದ್ದರು
ರಾಜಕೀಯ ಲಾಭಕ್ಕಾಗಿ ವರ್ಗ ದ್ವೇಷವನ್ನು ಸೃಷ್ಟಿಸುವ ಗುರಿ ಹೊಂದಿರುವ ಈ ಹೇಳಿಕೆಗಳ ಮೂಲಕ ರಾಹುಲ್ ಗಾಂಧಿ ದುರ್ಬಲ ವರ್ಗಗಳನ್ನು ಪ್ರಚೋದಿಸಲು ಪ್ರಯತ್ನಿಸಿದ್ದಾರೆ ಎಂದು ಗುಪ್ತಾ ಆರೋಪಿಸಿದ್ದಾರೆ.
ಕಾಂಗ್ರೆಸ್ ಹಿತಾಸಕ್ತಿಗಳನ್ನು ಹೆಚ್ಚಿಸುವ ಪ್ರಯತ್ನವಾಗಿ ರಾಹುಲ್ ಗಾಂಧಿ ಉದ್ದೇಶಪೂರ್ವಕವಾಗಿ ಆರ್ಥಿಕವಾಗಿ ದುರ್ಬಲ ವರ್ಗಗಳಲ್ಲಿ ಹಗೆತನ ಮತ್ತು ದ್ವೇಷ ಬಿತ್ತಲು ಪ್ರಯತ್ನಿಸಿದ್ದಾರೆ ಎಂದು ಅವರು ಆರೋಪಿಸಿದ್ದರು.