ರಾಜ್ಯಸಭೆ ಚುನಾವಣೆ: ಸೋನಿಯಾ ಗಾಂಧಿ ನಾಮಪತ್ರ ಸಲ್ಲಿಕೆ ಇಂದು
x

ರಾಜ್ಯಸಭೆ ಚುನಾವಣೆ: ಸೋನಿಯಾ ಗಾಂಧಿ ನಾಮಪತ್ರ ಸಲ್ಲಿಕೆ ಇಂದು


ಹೊಸದಿಲ್ಲಿ/ಜೈಪುರ, ಫೆ.14 (ಪಿಟಿಐ) : ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ರಾಜಸ್ಥಾನದಿಂದ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಐದು ಬಾರಿ ಲೋಕಸಭಾ ಸದಸ್ಯರಾಗಿರುವ ಅವರು ಇದೇ ಮೊದಲ ಬಾರಿಗೆ ರಾಜ್ಯಸಭೆಗೆ ಸ್ಪರ್ಧಿಸುತ್ತಿದ್ದಾರೆ. ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರೊಡನೆ ಇರಲಿದ್ದಾರೆ ಎಂದು ಪಕ್ಷದ ಮೂಲಗಳು ಹೇಳಿವೆ. ಲೋಕಸಭೆಯಲ್ಲಿ ರಾಯ್‌ ಬರೇಲಿಯನ್ನು ಪ್ರತಿನಿಧಿಸುತ್ತಿರುವ ಅವರು ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿಸ್ಪರ್ಧಿಸುವುದಿಲ್ಲ. ಮೊ ದಲ ಬಾರಿಗೆ 1999 ರಲ್ಲಿ ಲೋಕಸಭೆಗೆ ಆಯ್ಕೆಯಾದ ಅವರು ಆನಂತರ ಐದು ಬಾರಿ ಸಂಸದೆ ಆಗಿದ್ದರು.

ಏಪ್ರಿಲ್‌ನಲ್ಲಿ 15 ರಾಜ್ಯಗಳ ಒಟ್ಟು 56 ರಾಜ್ಯಸಭೆ ಸದಸ್ಯರು ನಿವೃತ್ತರಾಗಲಿದ್ದಾರೆ. ಆ ಸ್ಥಾನಗಳನ್ನು ತುಂಬಲು ಫೆಬ್ರವರಿ 27 ರಂದು ಚುನಾವಣೆ ನಡೆಯಲಿದೆ. ನಾಮಪತ್ರ ಸಲ್ಲಿಸಲು ಫೆಬ್ರವರಿ 15 ಕೊನೆಯ ದಿನ. ರಾಜಸ್ಥಾನದಿಂದ ಆಯ್ಕೆಯಾದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಸ್ಥಾನ ಏಪ್ರಿಲ್‌ನಲ್ಲಿ ತೆರವಾಗಲಿದೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಆಗಸ್ಟ್ 1964 ರಿಂದ ಫೆಬ್ರವರಿ 1967 ರವರೆಗೆ ಸಂಸತ್ತಿನ ಮೇಲ್ಮನೆ ಸದಸ್ಯರಾಗಿದ್ದರು. ಸೋನಿಯಾ ರಾಜ್ಯಸಭೆಯನ್ನು ಪ್ರವೇಶಿಸಲಿರುವ ಗಾಂಧಿ ಕುಟುಂಬದ ಎರಡನೇ ಸದಸ್ಯರಾಗಲಿದ್ದಾರೆ. ದ್ವೈವಾರ್ಷಿಕ ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್‌ ಯಾವುದೇ ಅಭ್ಯರ್ಥಿಯನ್ನು ಅಧಿಕೃತವಾಗಿ ಘೋಷಿಸಿಲ್ಲ.

ಈ ಬಾರಿ ರಾಯ್ ಬರೇಲಿಯಿಂದ ಪ್ರಿಯಾಂಕಾ ಗಾಂಧಿ ವಾದ್ರಾ ಸ್ಪರ್ಧಿಸಬಹುದು ಎಂಬ ವದಂತಿ ಹಬ್ಬಿದೆ.

Read More
Next Story