ಸಲ್ಮಾನ್‌ ಖಾನ್‌ಗೆ ಮತ್ತೆ ಭೂಗತ ಪಾತಕಿ ಬಿಷ್ಣೋಯ್ ಗ್ಯಾಂಗ್‌ನಿಂದ ‌ಕೊಲೆ ಬೆದರಿಕೆ
x

ಸಲ್ಮಾನ್‌ ಖಾನ್‌ಗೆ ಮತ್ತೆ ಭೂಗತ ಪಾತಕಿ ಬಿಷ್ಣೋಯ್ ಗ್ಯಾಂಗ್‌ನಿಂದ ‌ಕೊಲೆ ಬೆದರಿಕೆ

ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ ಅವರಿಗೆ . ಕುಖ್ಯಾತ ಭೂಗತ ಪಾತಕಿ ಲಾರೆನ್ಸ್‌ ಬಿಷ್ಣೋಯ್‌ ತಂಡದಿಂದ ಬೆದರಿಕೆ ಬಂದಿದೆ. 5 ಕೋಟಿ ರೂ ಹಣ ನೀಡದಿದ್ದರೆ, ಮಹಾರಾಷ್ಟ್ರ ಮಾಜಿ ಸಚಿವ ಬಾಬಾ ಸಿದ್ದಿಕ್‌ ಗೆ ಆದ ಗತಿಯೇ ಆಗಲಿದೆ ಎಂಬ ಸಂದೇಶ ಬಂದಿದೆ.


ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ ಅವರಿಗೆ ಮತ್ತೆ ಭೂಗತ ಜಗತ್ತಿನಿಂದ ಜೀವ ಬೆದರಿಕೆ ಬಂದಿದೆ. ಕುಖ್ಯಾತ ಭೂಗತ ಪಾತಕಿ ಲಾರೆನ್ಸ್‌ ಬಿಷ್ಣೋಯ್‌ ಗೆ 5 ಕೋಟಿ ರೂ ಹಣ ನೀಡದಿದ್ದರೆ, ಮಹಾರಾಷ್ಟ್ರ ಮಾಜಿ ಸಚಿವ ಬಾಬಾ ಸಿದ್ದಿಕ್‌ ಗೆ ಆದ ಗತಿಯೇ ಆಗಲಿದೆ ಎಂಬ ಬೆದರಿಕೆ ಸಂದೇಶ ಬಂದಿದೆ.

ಈ ಸಂದೇಶ ತಮ್ಮ ವಾಟ್ಸಾಪ್‌ ಗೆ ಶುಕ್ರವಾರ (ಅಕ್ಟೋಬರ್ 18)ಬಂದಿರುವುದಾಗಿ ಮುಂಬಯಿ ಟ್ರಾಫಿಕ್ ಪೊಲೀಸರು ಹೇಳಿದ್ದಾರೆ. ಮುಂಬೈ ಪೊಲೀಸರ ಪ್ರಕಾರ, ಸಲ್ಮಾನ್ 5 ಕೋಟಿ ರೂಪಾಯಿ ಪಾವತಿಸದಿದ್ದರೆ, ಸಲ್ಮಾನ್‌ ಖಾನ್ ಅವರ ಸ್ಥಿತಿ ಬಾಬಾ ಸಿದ್ದಿಕ್‌ಗಿಂತ ಕೆಟ್ಟದಾಗಿರುತ್ತದೆ ಎಂದು ಸಂದೇಶದಲ್ಲಿ ಹೇಳಲಾಗಿದೆ.

ಕಳೆದ ವಾರ, ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕ್ ಅವರನ್ನು ಮುಂಬೈನಲ್ಲಿರುವ ಅವರ ಶಾಸಕ ಪುತ್ರ ಜೀಶಾನ್ ಸಿದ್ದಿಕ್ ಅವರ ಕಚೇರಿಯ ಹೊರಗೆ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.‌ ಮುಂಬೈ ಪೊಲೀಸರ ಪ್ರಕಾರ, ಸಿದ್ದಿಕ್‌ ಅವರನ್ನು ಬಿಷ್ಣೋಯ್ ಗ್ಯಾಂಗ್ ಸದಸ್ಯರು ಕೊಂದಿದ್ದಾರೆ.

ಮುಂಬೈ ಟ್ರಾಫಿಕ್ ಪೊಲೀಸರ ವಾಟ್ಸಾಪ್ ಸಂಖ್ಯೆಗೆ ಈ ಬೆದರಿಕೆ ಸಂದೇಶ ಬಂದಿದೆ. ಬೆದರಿಕೆ ಸಂದೇಶ ಕಳುಹಿಸಿದವರು, ʼಲಘುವಾಗಿ ತೆಗೆದುಕೊಳ್ಳಬೇಡಿ, ಸಲ್ಮಾನ್ ಖಾನ್ ಜೀವಂತವಾಗಿರಲು ಬಯಸಿದರೆ ಮತ್ತು ಲಾರೆನ್ಸ್ ಬಿಷ್ಣೋಯ್ ಜತೆಗೆ ದ್ವೇಷವನ್ನು ಕೊನೆಗೊಳಿಸಲು ಬಯಸಿದರೆ, ಅವರು 5 ಕೋಟಿ ರೂಪಾಯಿಗಳನ್ನು ಪಾವತಿಸಬೇಕಾಗುತ್ತದೆ. ಹಣ ನೀಡದಿದ್ದರೆ ಸಲ್ಮಾನ್ ಖಾನ್ ಸ್ಥಿತಿ ಬಾಬಾ ಸಿದ್ದಿಕ್ ಗಿಂತ ಹೀನಾಯವಾಗುತ್ತದೆ' ಎಂದು ಬೆದರಿಕೆ ಒಡ್ಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಈ ಕುರಿತು ತನಿಖೆ ಆರಂಭಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Read More
Next Story