ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನಿರಾಕರಣೆ
x

ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನಿರಾಕರಣೆ

ಸುಪ್ರೀಂ ಕೋರ್ಟ್‌ ಸಿಬಿಐಗೆ ನೋಟಿಸ್‌ ಜಾರಿಗೊಳಿಸಿದ್ದು, ಪ್ರಕರಣದ ವಿಚಾರಣೆಯನ್ನು ಆಗಸ್ಟ್ 23ಕ್ಕೆ ಮುಂದೂಡಿದೆ.


ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಅಬಕಾರಿ ನೀತಿ ಹಗರಣದಲ್ಲಿ ಮಧ್ಯಂತರ ಜಾಮೀನು ನೀಡಲು ಸುಪ್ರೀಂ ಕೋರ್ಟ್ ಬುಧವಾರ (ಆಗಸ್ಟ್ 14) ನಿರಾಕರಿಸಿದೆ. ನ್ಯಾಯಾಲಯವು ಕೇಂದ್ರೀಯ ತನಿಖಾ ದಳ (ಸಿಬಿಐ)ಕ್ಕೆ ನೋಟಿಸ್ ಜಾರಿ ಮಾಡಿದೆ.

ದೆಹಲಿ ಹೈಕೋರ್ಟ್ ಆದೇಶದ ವಿರುದ್ಧ ಕೇಜ್ರಿವಾಲ್ ಸಲ್ಲಿಸಿದ ಮನವಿ ಮೇರೆಗೆ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು ಸಿಬಿಐಗೆ ನೋಟಿಸ್ ಜಾರಿ ಮಾಡಿತು.

ʻನಾವು ಯಾವುದೇ ಮಧ್ಯಂತರ ಜಾಮೀನು ನೀಡುತ್ತಿಲ್ಲ. ಸಿಬಿಐಗೆ ನೋಟಿಸ್ ನೀಡುತ್ತೇವೆ,ʼ ಎಂದು ಕೇಜ್ರಿವಾಲ್ ಪರ ವಕೀಲ ಅಭಿಷೇಕ್ ಸಿಂಘ್ವಿ ಅವರಿಗೆ ಪೀಠ ತಿಳಿಸಿದೆ. ಪ್ರಕರಣದ ವಿಚಾರಣೆಯನ್ನು ಆಗಸ್ಟ್ 23ಕ್ಕೆ ಮುಂದೂಡಲಾಗಿದೆ.

ದೆಹಲಿ ಹೈಕೋರ್ಟ್ ಆಗಸ್ಟ್ 5 ರಂದು ಮುಖ್ಯಮಂತ್ರಿಯ ಬಂಧನವನ್ನು ಕಾನೂನುಬದ್ಧವೆಂದು ಎತ್ತಿಹಿಡಿದಿದ್ದು, ಸಿಬಿಐ ಕೃತ್ಯದಲ್ಲಿ ಯಾವುದೇ ದುರುದ್ದೇಶವಿಲ್ಲ ಎಂದು ಹೇಳಿದೆ. ದೆಹಲಿ ಲೆಫ್ಟಿನೆಂಟ್ ಗವರ್ನರ್ ಅವರು ಅಬಕಾರಿ ನೀತಿಯಲ್ಲಿನ ಅಕ್ರಮಗಳು ಮತ್ತು ಭ್ರಷ್ಟಾಚಾರದ ಬಗ್ಗೆ ಸಿಬಿಐ ತನಿಖೆಗೆ ಆದೇಶಿಸಿದ ನಂತರ 2022 ರಲ್ಲಿ ಅಬಕಾರಿ ನೀತಿಯನ್ನು ರದ್ದುಗೊಳಿಸಲಾಯಿತು.

Read More
Next Story