
NEET-UG 2024| ಸಿಬಿಐ ತನಿಖೆಗೆ ಮನವಿ: ಕೇಂದ್ರ, ಎನ್‌ಟಿಎ ಪ್ರತಿಕ್ರಿಯೆ ಕೋರಿದ ಸುಪ್ರೀಂ ಕೋರ್ಟ್
ನೀಟ್-ಯುಜಿ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಇತರ ಅಕ್ರಮ ಆರೋಪದ ಬಗ್ಗೆ ಸಿಬಿಐ ತನಿಖೆ ಕೋರಿ ಸಲ್ಲಿಕೆಯಾದ ಮನವಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್, ಕೇಂದ್ರ ಮತ್ತು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯಿಂದ ಪ್ರತಿಕ್ರಿಯೆಗಳನ್ನು ಕೋರಿದೆ.
ಹಿತೇನ್ ಸಿಂಗ್ ಕಶ್ಯಪ್ ಎಂಬುವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರ ರಜಾಕಾಲದ ಪೀಠ, ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಬಿಹಾರ ಸರ್ಕಾರದಿಂದ ಎರಡು ವಾರಗಳಲ್ಲಿ ಪ್ರತಿಕ್ರಿಯೆಯನ್ನು ಕೇಳಿದೆ.
ಬೇಸಿಗೆ ರಜೆ ನಂತರ ಜುಲೈ 8 ರಂದು ಸುಪ್ರೀಂ ಕೋರ್ಟ್ ಕಾರ್ಯನಿರ್ವಹಣೆ ಆರಂಭಿಸಲಿದ್ದು, ಬಾಕಿ ಉಳಿದ ಇತರ ಅರ್ಜಿಗಳೊಂದಿಗೆ ಪಿಐಎಲ್ ಅನ್ನು ಸಹ ತೆಗೆದುಕೊಳ್ಳಲಾಗುವುದು ಎಂದು ನ್ಯಾಯಾಲಯ ಹೇಳಿದೆ.
Next Story