Delhi Election : ದೆಹಲಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ: ವೀಕ್ಷಕರ ನೇಮಕ
x

Delhi Election : ದೆಹಲಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ: ವೀಕ್ಷಕರ ನೇಮಕ

Delhi Election : ಬುಧವಾರ ಸಂಜೆ 7 ಗಂಟೆಗೆ ಪಕ್ಷದ ಕಚೇರಿಯಲ್ಲಿ ಬಿಜೆಪಿ ಮುಖ್ಯಮಂತ್ರಿ ಯಾರು ಎಂಬುದು ಘೋಷಣೆಯಾಗಲಿದೆ. ದೆಹಲಿಯ ರಾಮಲೀಲಾ ಮೈದಾನದಲ್ಲಿ ನಾಳೆ (ಗುರುವಾರ) ಸಂಜೆ 4.30ರ ಸುಮಾರಿಗೆ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ .


ದೆಹಲಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಕೇಂದ್ರ ವೀಕ್ಷಕರನ್ನುಬುಧವಾರ ನೇಮಕ ಮಾಡಲಾಗಿದ್ದು, ಸಂಸದ ರವಿಶಂಕರ್ ಪ್ರಸಾದ್ ಮತ್ತು ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಓಂ ಪ್ರಕಾಶ್ ಧನಕರ್​ಗೆ ಹೊಣೆಗಾರಿಕೆ ನೀಡಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಬುಧವಾರ ಸಂಜೆ 7 ಗಂಟೆಗೆ ಪಕ್ಷದ ಕಚೇರಿಯಲ್ಲಿ ಬಿಜೆಪಿ ಮುಖ್ಯಮಂತ್ರಿ ಯಾರು ಎಂಬುದು ಘೋಷಣೆಯಾಗಲಿದೆ. ದೆಹಲಿಯ ರಾಮಲೀಲಾ ಮೈದಾನದಲ್ಲಿ ನಾಳೆ (ಗುರುವಾರ) ಸಂಜೆ 4.30ರ ಸುಮಾರಿಗೆ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ . ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಸೇರಿದಂತೆ ಹಿರಿಯ ಬಿಜೆಪಿ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಸೋಮವಾರ ನಡೆಯಬೇಕಿದ್ದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯನ್ನು ಬುಧವಾರಕ್ಕೆ ಮುಂದೂಡಲಾಗಿದ್ದು, ಅಂದು ಪಕ್ಷವು ಮುಖ್ಯಮಂತ್ರಿ ಹುದ್ದೆಗೆ ಅಭ್ಯರ್ಥಿಯನ್ನು ಅಂತಿಮಗೊಳಿಸಲಿದೆ. ಪ್ರಮಾಣ ವಚನ ಸಮಾರಂಭದ ವಿವರಗಳನ್ನು ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.

70 ಸದಸ್ಯ ಬಲದ ದೆಹಲಿ ವಿಧಾನಸಭೆಗೆ ಫೆಬ್ರುವರಿ 5ರಂದು ಮತದಾನ ನಡೆದಿತ್ತು. ಫೆ.8ರಂದು ಪ್ರಕಟವಾದ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ 48 ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ 26 ವರ್ಷಗಳ ಬಳಿಕ ದೆಹಲಿಯಲ್ಲಿ ಅಧಿಕಾರದ ಗದ್ದುಗೆ ಏರಿದೆ. ಎಎಪಿ 22 ಸ್ಥಾನಗಳನ್ನು ಗೆದ್ದು ದಶಕದ ಆಡಳಿತವನ್ನು ಕೊನೆಗೊಳಿಸಿದೆ.

Read More
Next Story