
ರಾಹುಲ್ ಮಂಕೂತಿಟ್ಟಲ್
ಮಹಿಳೆಗೆ ಲೈಂಗಿಕ ಕಿರುಕುಳ| ಕೇರಳ ಕಾಂಗ್ರೆಸ್ ಶಾಸಕನ ವಿರುದ್ಧ ಎಫ್‌ಐಆರ್
ತಿರುವನಂತಪುರಂ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ನ.27 ರಂದು ಸಂತ್ರಸ್ಥೆಯ ಹೇಳಿಕೆ ದಾಖಲಿಸಿಕೊಂಡು ನ.28 ರಂದು ಬೆಳಗ್ಗೆ ಪ್ರಕರಣ ದಾಖಲಿಸಲಾಗಿದೆ. ತಮ್ಮ ವಿರುದ್ಧ ದೂರು ದಾಖಲಾಗುತ್ತಿದ್ದಂತೆ ಶಾಸಕ ರಾಹುಲ್ ನಾಪತ್ತೆಯಾಗಿದ್ದಾರೆ.
ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕೇರಳದ ಕಾಂಗ್ರೆಸ್ ಶಾಸಕ ರಾಹುಲ್ ಮಂಕೂಟತ್ತಿಲ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಸಂತ್ರಸ್ಥ ಮಹಿಳೆಯು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ಭೇಟಿಯಾಗಿ ದೂರು ನೀಡಿದ್ದರು. ದೂರಿನ ಸಂಬಂಧ ಸೂಕ್ತ ಕ್ರಮ ಜರುಗಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ ಹಿನ್ನೆಲೆಯಲ್ಲಿ ಶಾಸಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಕೇಳಿ ಬಂದ ಒಂದು ತಿಂಗಳ ನಂತರ ಈ ಬೆಳವಣಿಗೆ ಸಂಭವಿಸಿದೆ. ಹೊಸ ಆಡಿಯೋ ಕ್ಲಿಪ್ ಮತ್ತು ಸ್ಟೀನ್‌ಶಾಟ್‌ಗಳು ವೈರಲ್ ಬಳಿಕ ಶಾಸಕರ ವಿರುದ್ಧ ಕ್ರಮಕ್ಕೆ ಒತ್ತಾಯಗಳು ಕೇಳಿ ಬಂದಿದ್ದವು.
ಅದರಂತೆ ತಿರುವನಂತಪುರಂ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ನ.27 ರಂದು ಸಂತ್ರಸ್ಥೆಯ ಹೇಳಿಕೆ ದಾಖಲಿಸಿಕೊಂಡು ನ.28 ರಂದು ಬೆಳಗ್ಗೆ ಪ್ರಕರಣ ದಾಖಲಿಸಲಾಗಿದೆ. ತಮ್ಮ ವಿರುದ್ಧ ದೂರು ದಾಖಲಾಗುತ್ತಿದ್ದಂತೆ ಶಾಸಕ ರಾಹುಲ್ ನಾಪತ್ತೆಯಾಗಿದ್ದಾರೆ.
ಪೊಲೀಸ್ ಠಾಣೆಯಲ್ಲಿ ದೂರು ದಾಖಲಾದ ಬಳಿಕ ಫೇಸ್ಬುಕ್ ಲೈವ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್ ಮಾಂಕೂಟತ್ತಿಲ್, ನಾನು ಯಾವುದೇ ತಪ್ಪು ಮಾಡಿಲ್ಲ, ಪ್ರಕರಣ ಸಂಬಂಧ ಕಾನೂನು ಹೋರಾಟ ನಡೆಸುತ್ತೇನೆ. ನ್ಯಾಯಾಲಯದಲ್ಲಿ ಮತ್ತು ಜನತಾ ನ್ಯಾಯಾಲಯದಲ್ಲಿ ಎಲ್ಲವನ್ನೂ ಸಾಬೀತುಪಡಿಸುತ್ತೇನೆ. ಸತ್ಯವೇ ಕೊನೆಗೆ ಗೆಲ್ಲಲಿದೆ ಎಂದು ಬರೆದುಕೊಂಡಿದ್ದಾರೆ.
ಲೈಂಗಿಕ ದೌರ್ಜನ್ಯದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಕಾಂಗ್ರೆಸ್ನ ಪ್ರಾಥಮಿಕ ಸದಸ್ಯತ್ವದಿಂದ ಅಮಾನತು ಮಾಡಲಾಗಿದೆ.

