ಸೋನಿಯಾ ಗಾಂಧಿ ರಾಜ್ಯಸಭೆ ಸದಸ್ಯರಾಗಿ ಪ್ರಮಾಣವಚನ ಸ್ವೀಕಾರ
x

ಸೋನಿಯಾ ಗಾಂಧಿ ರಾಜ್ಯಸಭೆ ಸದಸ್ಯರಾಗಿ ಪ್ರಮಾಣವಚನ ಸ್ವೀಕಾರ


ಗುರುವಾರ (ಮಾ. 4)- ಮಾಜಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಸೇರಿದಂತೆ 14 ಮಂದಿ ರಾಜ್ಯಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ನೂತನ ಸಂಸತ್ ಭವನದಲ್ಲಿ ಉಪರಾಷ್ಟ್ರಪತಿ ಹಾಗೂ ರಾಜ್ಯಸಭಾಧ್ಯಕ್ಷ ಜಗದೀಪ್ ಧನಕರ್, ನೂತನ ಸದಸ್ಯರಿಗೆ ಪ್ರಮಾಣವಚನ ಬೋಧಿಸಿದರು.

ಸೋನಿಯಾ ಗಾಂಧಿ ಅವರು ರಾಜಸ್ಥಾನದಿಂದ ಹಾಗೂ ವೈಷ್ಣವ್ ಒಡಿಶಾದಿಂದ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಕರ್ನಾಟಕದಿಂದ ಕಾಂಗ್ರೆಸ್ ನಾಯಕ ಅಜಯ್ ಮಾಕನ್, ಉತ್ತರ ಪ್ರದೇಶದ ಬಿಜೆಪಿ ನಾಯಕ ಆರ್‌.ಪಿ.ಎನ್. ಸಿಂಗ್, ಪಶ್ಚಿಮ ಬಂಗಾಳದ ಬಿಜೆಪಿ ಸದಸ್ಯ ಸಮಿಕ್ ಭಟ್ಟಾಚಾರ್ಯ, ವೈಎಸ್‌ಆರ್‌ಸಿಪಿ ನಾಯಕರಾದ ಗೋಲಾ ಬಾಬು ರಾವ್, ಮೇಧಾ ರಘುನಾಥ್ ರೆಡ್ಡಿ ಮತ್ತು ಯೆರುಂ ವೆಂಕಟ ಸುಬ್ಬಾ ರೆಡ್ಡಿ ಅವರುಪ್ರಮಾಣವಚನ ಸ್ವೀಕರಿಸಿದವರಲ್ಲಿ ಸೇರಿದ್ದಾರೆ. ನಂತರ ಎಲ್ಲರೂ ಸಭಾಧ್ಯಕ್ಷರೊಂದಿಗೆ ಗುಂಪು ಛಾಯಾಚಿತ್ರ ತೆಗೆಸಿಕೊಂಡರು.

ಮೊದಲ ಬಾರಿಗೆ ರಾಜ್ಯಸಭೆಗೆ: ಸೋನಿಯಾ ಗಾಂಧಿ ಅವರು ಮೊದಲ ಬಾರಿಗೆ ರಾಜ್ಯಸಭೆ ಸದಸ್ಯೆಯಾಗಿದ್ದಾರೆ. ಸಭಾನಾಯಕ ಪಿಯೂಷ್ ಗೋಯಲ್ ಮತ್ತು ಕಾಂಗ್ರೆಸ್ ಅಧ್ಯಕ್ಷ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಪುತ್ರಿ ಪ್ರಿಯಾಂಕಾ ಗಾಂಧಿ ವಾದ್ರಾ, ರಾಜ್ಯಸಭೆ ಉಪಾಧ್ಯಕ್ಷ ಹರಿವಂಶ್ ಮತ್ತು ಪ್ರಧಾನ ಕಾರ್ಯದರ್ಶಿ ಪಿ.ಸಿ. ಮೋದಿ ಉಪಸ್ಥಿತರಿದ್ದರು.

Read More
Next Story