Operation Sindoor: Control rooms set up across Kashmirs 10 districts
x

Operation Sindoor: ಕಾಶ್ಮೀರದ 10 ಜಿಲ್ಲೆಗಳಲ್ಲಿ ಕಂಟ್ರೋಲ್ ರೂಂ ಸ್ಥಾಪನೆ

ಶ್ರೀನಗರದ ಜಿಲ್ಲಾಧಿಕಾರಿ ಕಚೇರಿಯ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ (DDMA)ದ ಮೇಲ್ವಿಚಾರಣೆಯಡಿಯಲ್ಲಿ, ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರದಲ್ಲಿ (DEOC) ಜಂಟಿ ಕಂಟ್ರೋಲ್ ರೂಂ ಸ್ಥಾಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.


ಶ್ರೀನಗರದ ಜಿಲ್ಲಾಧಿಕಾರಿ ಕಚೇರಿಯ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ (DDMA)ದ ಮೇಲ್ವಿಚಾರಣೆಯಡಿಯಲ್ಲಿ, ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರದಲ್ಲಿ (DEOC) ಜಂಟಿ ಕಂಟ್ರೋಲ್ ರೂಂ ಸ್ಥಾಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶವೊಂದರಲ್ಲಿ ತಿಳಿಸಿದ್ದಾರೆ.

ಅಪರೇಷನ್​ ಸಿಂದೂರ ಹೆಸರಿನಲ್ಲಿ ಭಾರತದ ಸೇನಾಪಡೆ, ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ (PoK) 9 ಭಯೋತ್ಪಾದಕ ಮೂಲಸೌಕರ್ಯ ಕೇಂದ್ರಗಳ ಮೇಲೆ ಕ್ಷಿಪಣಿ ದಾಳಿಗಳನ್ನು ನಡೆಸಿದ ಉಂಟಾದ ಉದ್ವಿಗ್ನತೆಯ ಬಳಿಕ ಕಾಶ್ಮೀರದಾದ್ಯಂತ 10 ಜಿಲ್ಲೆಗಳಲ್ಲಿ ಕೇಂದ್ರೀಕೃತ ಕಂಟ್ರೋಲ್ ರೂಂಗಳನ್ನು ತೆರೆಯಲಾಗಿದೆ. ಈ ಕಂಟ್ರೋಲ್ ರೂಂಗಳು ಪ್ರಸ್ತುತ ಸನ್ನಿವೇಶವನ್ನು ಗಮನಿಸಲು ಮತ್ತು ತುರ್ತು ಪರಿಸ್ಥಿತಿಗಳನ್ನು ನಿರ್ವಹಿಸಲು ಕಾರ್ಯನಿರ್ವಹಿಸಲಿವೆ.

ಶ್ರೀನಗರದ ಜಿಲ್ಲಾಧಿಕಾರಿ ಕಚೇರಿಯ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ (DDMA)ದ ಮೇಲ್ವಿಚಾರಣೆಯಡಿಯಲ್ಲಿ, ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರದಲ್ಲಿ (DEOC) ಜಂಟಿ ಕಂಟ್ರೋಲ್ ರೂಂ ಸ್ಥಾಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಇದೇ ರೀತಿಯ ಕಂಟ್ರೋಲ್ ರೂಂಗಳನ್ನು ಕಾಶ್ಮೀರದ ಇತರ 9 ಜಿಲ್ಲೆಗಳಲ್ಲಿಯೂ ಸ್ಥಾಪಿಸಲಾಗಿದೆ.

ಕಂಟ್ರೋಲ್ ರೂಂನ ಕಾರ್ಯನಿರ್ವಹಣೆ

ಜಿಲ್ಲಾಧಿಕಾರಿ ಪ್ರಕಾರ, ಈ ಕಂಟ್ರೋಲ್ ರೂಂಗಳು 24 ಗಂಟೆಯೂ ಕಾರ್ಯನಿರ್ವಹಿಸಲಿವೆ. ಇವು ಕೇಂದ್ರೀಕೃತ ತಾಣಗಳಾಗಿ ಕಾರ್ಯನಿರ್ವಹಿಸಲಿವೆ. ವಿವಿಧ ಇಲಾಖೆಗಳ ನಡುವೆ ಸಮನ್ವ ಸುಗಮಗೊಳಿಸುವುದು, ಪ್ರಸ್ತುತ ಬೆಳವಣಿಗೆಗಳನ್ನು ಗಮನಿಸುವುದು ಮತ್ತು ಸಕಾಲಿಕ ಮಾಹಿತಿ ಪ್ರಸಾರ ಮಾಡುವುದು ಇವುಗಳ ಮುಖ್ಯ ಉದ್ದೇಶವಾಗಿದೆ.

ಈ ಕಂಟ್ರೋಲ್ ರೂಂಗಳು ಸಾರ್ವಜನಿಕರ ಕುಂದುಕೊರತೆಗಳಿಗೆ ಪರಿಹಾರ ಕಲ್ಪಿಸುವ ವೇದಿಕೆಯಾಗಿಯೂ ಕಾರ್ಯನಿರ್ವಹಿಸಲಿವೆ. ತಕ್ಷಣದ ಸಮಸ್ಯೆಗಳನ್ನು ಬಗೆಹರಿಸಲು ಇವು ಸಹಾಯ ಮಾಡಲಿವೆ. ಸಾರ್ವಜನಿಕರು ತಮ್ಮ ಆತಂಕಗಳನ್ನು ವ್ಯಕ್ತಪಡಿಸಲು, ತುರ್ತು ಸೇವೆಗಳನ್ನೂ ಪಡೆಯಬಹುದಾಗಿದೆ.

ಜಮ್ಮು ಮತ್ತು ಕಾಶ್ಮೀರ ಸರ್ಕಾರವು ಎಲ್ಲಾ ಆಡಳಿತಾತ್ಮಕ ಕಾರ್ಯದರ್ಶಿಗಳು ಮತ್ತು ಇಲಾಖೆ ಮುಖ್ಯಸ್ಥರಿಗೆ, ಅತ್ಯಂತ ಅನಿವಾರ್ಯ ಸಂದರ್ಭಗಳನ್ನು ಹೊರತುಪಡಿಸಿ ಸರ್ಕಾರಿ ಉದ್ಯೋಗಿಗಳಿಗೆ ರಜೆ ಮಂಜೂರು ಮಾಡದಂತೆ ಸೂಚಿಸಿದೆ. ಈ ಮೂಲಕ ತುರ್ತು ಪರಿಸ್ಥಿತಿ ಎದುರಿಸಲು ಎಲ್ಲಾ ಇಲಾಖೆಗಳ ಸಂಪೂರ್ಣ ಸಿದ್ಧತೆ ನಡೆಸಿಕೊಂಡಿದೆ.

Read More
Next Story