Umar Khalid: 2020ರ ದೆಹಲಿ ಗಲಭೆ ಪ್ರಕರಣ: ಉಮರ್ ಖಾಲಿದ್ಗೆ 7 ದಿನಗಳ ಮಧ್ಯಂತರ ಜಾಮೀನು
Umar Khalid: ಕುಟುಂಬ ಸದಸ್ಯರೊಬ್ಬರ ಮದುವೆಯಲ್ಲಿ ಭಾಗವಹಿಸಲು ದೆಹಲಿ ನ್ಯಾಯಾಲಯವು ಉಮರ್ ಖಾಲಿದ್ಗೆ ಏಳು ದಿನಗಳ ಜಾಮೀನು ನೀಡಿದೆ ಎಂದು ವರದಿಯಾಗಿದೆ
2020 ರ ದೆಹಲಿ ಗಲಭೆ ಪ್ರಕರಣದಲ್ಲಿ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್ಯು) ಹಳೆ ವಿದ್ಯಾರ್ಥಿ ಉಮರ್ ಖಾಲಿದ್ಗೆ ಮಧ್ಯಂತರ ಜಾಮೀನು ದೊರಕಿದೆ. ಕರ್ಕೊದೂಮಾ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಸಮೀರ್ ಬಾಜಪೇಯಿ ಬುಧವಾರ (ಡಿಸೆಂಬರ್ 18) ಜಾಮೀನು ನೀಡಿದ್ದಾರೆ. ಖಾಲಿದ್ ಕುಟುಂಬದಲ್ಲಿ ಮದುವೆಯಲ್ಲಿ ಭಾಗವಹಿಸಲು ಏಳು ದಿನಗಳ ಜಾಮೀನು ನೀಡಿದ್ದಾರೆ ಎಂದು ಲೈವ್ ಲಾ ವರದಿ ಮಾಡಿದೆ.
ದೆಹಲಿ ಹೈಕೋರ್ಟ್ 2022 ರ ಅಕ್ಟೋಬರ್ನಲ್ಲಿ ಖಾಲಿದ್ಗೆ ಜಾಮೀನು ನಿರಾಕರಿಸಿತು. ನಂತರ ಅವರು ಸುಪ್ರೀಂ ಕೋರ್ಟ್ ಅನ್ನು ಸಂಪರ್ಕಿಸಿದ್ದರು. ಬಳಿಕ ತಮ್ಮ ಅರ್ಜಿಯನ್ನು ವಾಪಸ್ ಪಡೆದಿದ್ದರು.
ಅವರು ವಿಚಾರಣಾ ನ್ಯಾಯಾಲಯದಲ್ಲಿ ಎರಡನೇ ನಿಯಮಿತ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದರು. ಅದನ್ನು ಈ ವರ್ಷದ ಆರಂಭದಲ್ಲಿ ತಿರಸ್ಕರಿಸಲಾಗಿದೆ. ಅವರು ತಮ್ಮ ಎರಡನೇ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್ನಲ್ಲಿ ತಿರಸ್ಕರಿಸಿದ್ದರು. ಆದರೆ ಮನವಿ ಇನ್ನೂ ವಿಚಾರಣೆಗೆ ಬಂದಿಲ್ಲ.
Next Story