Mysuru Dasara 2024 | ಅಂತರರಾಜ್ಯ ಪ್ರವಾಸಿ ವಾಹನಗಳಿಗೆ ಅ.12 ರವರೆಗೆ ತೆರಿಗೆ ವಿನಾಯ್ತಿ
x

Mysuru Dasara 2024 | ಅಂತರರಾಜ್ಯ ಪ್ರವಾಸಿ ವಾಹನಗಳಿಗೆ ಅ.12 ರವರೆಗೆ ತೆರಿಗೆ ವಿನಾಯ್ತಿ

ಕರ್ನಾಟಕ ಹೊರತುಪಡಿಸಿ ಇತರ ರಾಜ್ಯಗಳಲ್ಲಿ ನೊಂದಾಯಿಸಲ್ಪಟ್ಟ ಹಾಗೂ ಆ ರಾಜ್ಯದಲ್ಲಿ ತೆರಿಗೆ ಪಾವತಿಸುತ್ತಿರುವ ವಾಹನಗಳು 2024 ಅ.4ರಿಂದ 12 ರವರೆಗೆ ತೆರಿಗೆ ಪಾವತಿಯಿಂದ ವಿನಾಯಿತಿ ಪಡೆಯಬಹುದು.


ಮೈಸೂರು ದಸರಾ ಮಹೋತ್ಸವ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಬರುವ ಅಂತರರಾಜ್ಯ ಪ್ರವಾಸಿ ವಾಹನಗಳಿಗೆ ತೆರಿಗೆ ಪಾವತಿಯಿಂದ ವಿನಾಯ್ತಿ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಕರ್ನಾಟಕ ಮೋಟಾರು ವಾಹನ ತೆರಿಗೆ ಅಧಿನಿಯಮದಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಸಾರ್ವಜನಿಕ ಹಿತದೃಷ್ಟಿಯಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸರ್ಕಾರದ ಅಧೀನ ಕಾರ್ಯದರ್ಶಿ ಪುಷ್ಪ.ವಿ.ಎಸ್. ಆದೇಶದಲ್ಲಿ ತಿಳಿಸಿದ್ದಾರೆ.

ಕರ್ನಾಟಕ ಹೊರತುಪಡಿಸಿ ಇತರ ರಾಜ್ಯಗಳಲ್ಲಿ ನೋಂದಾಯಿಸಲ್ಪಟ್ಟ ಹಾಗೂ ಆ ರಾಜ್ಯದಲ್ಲಿ ತೆರಿಗೆ ಪಾವತಿಸುತ್ತಿರುವ ವಾಹನಗಳು 2024 ಅ.4 ರಿಂದ 12 ರವರೆಗೆ ತೆರಿಗೆ ಪಾವತಿಯಿಂದ ವಿನಾಯಿತಿ ಪಡೆಯಬಹುದು. ಈ ದಿನಗಳಲ್ಲಿ ಮೈಸೂರು ನಗರ ಹಾಗೂ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೃಷ್ಣರಾಜಸಾಗರ ಜಲಾಶಯ ವೀಕ್ಷಿಸಲು ಬರುವ ವಾಹನಗಳಿಗೆ ಮಾತ್ರ ತೆರಿಗೆ ಪಾವತಿಯಿಂದ ವಿನಾಯ್ತಿ ಸಿಗಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Read More
Next Story