ತೆಲಂಗಾಣ | 44 ಐಎಎಸ್ ಅಧಿಕಾರಿಗಳ ವರ್ಗಾವಣೆ
x

ತೆಲಂಗಾಣ | 44 ಐಎಎಸ್ ಅಧಿಕಾರಿಗಳ ವರ್ಗಾವಣೆ


ತೆಲಂಗಾಣದ ಕಾಂಗ್ರೆಸ್ ಸರ್ಕಾರವು ಸೋಮವಾರ 44 ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ ಅಥವಾ ಹುದ್ದೆಗೆ ನಿಯೋಜಿಸಿದೆ.

ಕಳೆದ ವರ್ಷ ಡಿಸೆಂಬರ್‌ನಲ್ಲಿ ಅಧಿಕಾರ ವಹಿಸಿಕೊಂಡ ನಂತರ ನಡೆದ ಐಎಎಸ್ ಅಧಿಕಾರಿಗಳ ಮೊದಲ ಪುನಾರಚನೆ ಇದಾಗಿದೆ. ತೆಲಂಗಾಣ ಸರ್ಕಾರದ ಮುಖ್ಯ ಕಾರ್ಯದರ್ಶಿ ಎ. ಶಾಂತಿಕುಮಾರಿ ಈ ಸಂಬಂಧ ಆದೇಶ ಹೊರಡಿಸಿದ್ದಾರೆ.

ಪ್ರಮುಖ ನೇಮಕಗಳು: ಪಂಚಾಯತ್ ರಾಜ್‌ನ ಪ್ರಧಾನ ಕಾರ್ಯದರ್ಶಿ ಸಂದೀಪ್ ಕುಮಾರ್ ಸುಲ್ತಾನಿಯಾ ಅವರನ್ನು ಹಣಕಾಸು ಪ್ರಧಾನ ಕಾರ್ಯದರ್ಶಿಯಾಗಿ ನಿಯೋಜಿಸಲಾಗಿದೆ. ಅವರು ಮುಂದಿನ ಆದೇಶದವರೆಗೆ ಈ ಹುದ್ದೆಯಲ್ಲಿ ಮುಂದುವರಿಯುತ್ತಾರೆ.

ಡಿ. ರೊನಾಲ್ಡ್ ರೋಸ್, ಆಯುಕ್ತರು, ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ (ಜಿಎಚ್‌ಎಂಸಿ)ಅವರನ್ನು ಇಂಧನ ಇಲಾಖೆ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಆಮ್ರಪಾಲಿ ಕಾಟಾ, ಹೈದರಾಬಾದ್ ಮಹಾನಗರ ಅಭಿವೃದ್ಧಿ ಪ್ರಾಧಿಕಾರದ ಜಂಟಿ ಮಹಾನಗರ ಪಾಲಿಕೆ ಆಯುಕ್ತರನ್ನು ಜಿಎಚ್‌ಎಂಸಿ ಕಮಿಷನರ್ ಹುದ್ದೆಗೆ ನಿಯೋಜಿಸಲಾಗಿದೆ.

ಯುವಜನ ಸೇವೆಗಳ ಪ್ರಧಾನ ಕಾರ್ಯದರ್ಶಿಯಾದ ಸಬ್ಯಸಾಚಿ ಘೋಷ್ ಅವರನ್ನು ಪಶುಸಂಗೋಪನೆಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಹುದ್ದೆಗಾಗಿ ಕಾಯುತ್ತಿರುವ ಸಂಜಯ್ ಕುಮಾರ್ ಅವರನ್ನು ಕಾರ್ಮಿಕ, ಉದ್ಯೋಗ, ತರಬೇತಿ ಮತ್ತು ಕಾರ್ಖಾನೆಗಳ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.

ಯೋಜನಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅಹ್ಮದ್ ನದೀಮ್ ಅವರನ್ನು ಪರಿಸರ, ಅರಣ್ಯ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ನಿಯೋಜಿಸಲಾಗಿದೆ.

Read More
Next Story