
ಮಾಹಿತಿ ಪಡೆದ ನಂತರ ಜಿಲ್ಲಾ ಪೊಲೀಸರು ಮತ್ತು ಜಾರ್ಖಂಡ್ ಜಾಗ್ವಾರ್ ಒಳಗೊಂಡ ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು.
ಜಾರ್ಖಂಡ್‌ನಲ್ಲಿ ಭದ್ರತಾ ಪಡೆಗಳಿಂದ ಮೂವರು ನಕ್ಸಲರ ಹತ್ಯೆ
ಎನ್‌ಕೌಂಟರ್ ನಂತರ ಎಕೆ-47 ಮತ್ತು ಎರಡು ಐಎನ್‌ಎಸ್‌ಎಎಸ್ ರೈಫಲ್‌ಗಳು ಸೇರಿದಂತೆ ಗಣನೀಯ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಹತರಾದ ಮಾವೋವಾದಿಗಳನ್ನು ಗುರುತಿಸುವ ಪ್ರಕ್ರಿಯೆ ನಡೆಯುತ್ತಿದೆ.
ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯಲ್ಲಿ ಶನಿವಾರ (ಜು.26) ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಜಾರ್ಖಂಡ್ ಜನ ಮುಕ್ತಿ ಪರಿಷತ್ (ಜೆಜೆಎಂಪಿ) ಸಂಘಟನೆಯ ಮೂವರು ಸದಸ್ಯರನ್ನು ಹತ್ಯೆ ಮಾಡಲಾಗಿದೆ.
ಜೆಜೆಎಂಪಿ ಗುಂಪಿನ ಸದಸ್ಯರ ಚಲನವಲನದ ಬಗ್ಗೆ ದೊರೆತ ಖಚಿತ ಸುಳಿವಿನ ಆಧಾರದ ಮೇಲೆ ಜಿಲ್ಲಾ ಪೊಲೀಸರು ಮತ್ತು ಜಾರ್ಖಂಡ್ ಜಾಗ್ವಾರ್ ತಂಡಗಳು ಜಂಟಿ ಕಾರ್ಯಾಚರಣೆ ಪ್ರಾರಂಭಿಸಿದ್ದರು. ಈ ವೇಳೆ ಭದ್ರತಾ ಪಡೆಗಳು ಮತ್ತು ಮಾವೋವಾದಿಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ಮೂವರು ಮಾವೋವಾದಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಕಾರ್ಯಾಚರಣೆಗಳ ಐಜಿ ಮೈಕೆಲ್ ರಾಜ್ ಎಸ್ ತಿಳಿಸಿದ್ದಾರೆ.
ಎನ್‌ಕೌಂಟರ್ ನಂತರ ಎಕೆ-47 ಮತ್ತು ಎರಡು ಐಎನ್‌ಎಸ್‌ಎಎಸ್ ರೈಫಲ್‌ಗಳು ಸೇರಿದಂತೆ ಗಣನೀಯ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಹತರಾದ ಮಾವೋವಾದಿಗಳನ್ನು ಗುರುತಿಸುವ ಪ್ರಕ್ರಿಯೆ ನಡೆಯುತ್ತಿದೆ.
ಮೇ ತಿಂಗಳಲ್ಲಿ ಜೆಜೆಎಂಪಿ ಮುಖ್ಯಸ್ಥನ ಹತ್ಯೆ
ಕೇವಲ ಎರಡು ತಿಂಗಳ ಅಂತರದಲ್ಲಿ ಜೆಜೆಎಂಪಿ ಸಂಘಟನೆಗೆ ಎದುರಾದ ಎರಡನೇ ದೊಡ್ಡ ಹಿನ್ನಡೆ ಇದಾಗಿದೆ. ಮೇ ತಿಂಗಳಲ್ಲಿ, ಜೆಜೆಎಂಪಿ ಮುಖ್ಯಸ್ಥ ಪಪ್ಪು ಲೋಹ್ರಾ ಅಲಿಯಾಸ್ ಸೂರ್ಯದೇವ್ ಲೋಹ್ರಾ, ಮತ್ತು ಮತ್ತೊಬ್ಬ ಪ್ರಮುಖ ಮಾವೋವಾದಿ ಪ್ರಭಾತ್ ಘಂಜು ಕೂಡ ಭದ್ರತಾ ಪಡೆಗಳ ಎನ್‌ಕೌಂಟರ್‌ನಲ್ಲಿ ಹತರಾಗಿದ್ದರು.
ಲೋಹ್ರಾ ಮೇಲೆ 10 ಲಕ್ಷ ರೂ. ಮತ್ತು ಘಂಜು ಮೇಲೆ 5 ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು. ಲೋಹ್ರಾ ಲಾತೇಹಾರ್ ಮತ್ತು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಭಯೋತ್ಪಾದನೆ ಹರಡುವಿಕೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿಪಡಿಸುವಿಕೆ ಸೇರಿದಂತೆ ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಸೆಪ್ಟೆಂಬರ್ 2021 ರಲ್ಲಿ ಜಾರ್ಖಂಡ್ ಜಾಗ್ವಾರ್‌ನ ಡೆಪ್ಯೂಟಿ ಕಮಾಂಡೆಂಟ್ ರಾಜೇಶ್ ಕುಮಾರ್ ಹತ್ಯೆಯಲ್ಲೂ ಭಾಗಿಯಾಗಿದ್ದ.