
ಅನೇಕರು ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿದ್ದಾರೆ.
ನ್ಯೂಯಾರ್ಕ್‌ನಲ್ಲಿ ಭೀಕರ ಬಸ್ ಅಪಘಾತ: ಭಾರತೀಯರೂ ಸೇರಿದಂತೆ ಐವರ ದುರ್ಮರಣ, ಹಲವರಿಗೆ ಗಾಯ
ಶುಕ್ರವಾರ ಮಧ್ಯಾಹ್ನ 12.30ರ ಸುಮಾರಿಗೆ ಪೆಂಬ್ರೋಕ್ ಬಳಿಯ ಅಂತರರಾಜ್ಯ ಹೆದ್ದಾರಿ 90 ರಲ್ಲಿ ಈ ದುರ್ಘಟನೆ ನಡೆದಿದೆ.
ಮೃತಪಟ್ಟಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ಸಂಭವಿಸಿದೆ. ಮೃತರ ಪೈಕಿ ಭಾರತೀಯರು, ಚೀನೀ ಮತ್ತು ಫಿಲಿಪಿನೋ ಪ್ರಜೆಗಳು ಸೇರಿದ್ದಾರೆ ಎಂದು ವರದಿಯಾಗಿದೆ.
ಶುಕ್ರವಾರ ಮಧ್ಯಾಹ್ನ 12.30ರ ಸುಮಾರಿಗೆ ಪೆಂಬ್ರೋಕ್ ಬಳಿಯ ಅಂತರರಾಜ್ಯ ಹೆದ್ದಾರಿ 90 ರಲ್ಲಿ ಈ ದುರ್ಘಟನೆ ನಡೆದಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಚಾಲಕನ ನಿಯಂತ್ರಣ ತಪ್ಪಿದ್ದೇ ಅಪಘಾತಕ್ಕೆ ಕಾರಣ ಎಂದು ರಾಜ್ಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಅಪಘಾತದ ರಭಸಕ್ಕೆ ಬಸ್ ಸಂಪೂರ್ಣವಾಗಿ ಪಲ್ಟಿಯಾಗಿದೆ.
ಅಪಘಾತದಲ್ಲಿ ಗಾಯಗೊಂಡವರನ್ನು ರಕ್ಷಣಾ ಸಿಬ್ಬಂದಿ ಹೆಲಿಕಾಪ್ಟರ್‌ಗಳ ಮೂಲಕ ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಿದ್ದಾರೆ. ಬಸ್‌ನಲ್ಲಿದ್ದ ಒಟ್ಟು 54 ಪ್ರಯಾಣಿಕರಲ್ಲಿ ಹಲವರ ಸ್ಥಿತಿ ಚಿಂತಾಜನಕವಾಗಿದೆ. ಹೆಚ್ಚಿನ ಪ್ರಯಾಣಿಕರು ವಿದೇಶಿಯರಾಗಿದ್ದರಿಂದ ತುರ್ತು ಸ್ಪಂದನೆಗಾಗಿ ಭಾಷಾಂತರಕಾರರ ನೆರವನ್ನು ಪಡೆಯಲಾಗಿದೆ.
ಪ್ರಾಥಮಿಕ ತನಿಖೆಯಲ್ಲಿ ಬಸ್‌ನಲ್ಲಿ ಯಾವುದೇ ಯಾಂತ್ರಿಕ ದೋಷ ಕಂಡುಬಂದಿಲ್ಲ. ಹೆಚ್ಚಿನ ಪ್ರಯಾಣಿಕರು ಸೀಟ್‌ಬೆಲ್ಟ್ ಧರಿಸಿರಲಿಲ್ಲ, ಇದು ಸಾವಿನ ಸಂಖ್ಯೆ ಹೆಚ್ಚಲು ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಘಟನೆಯಿಂದಾಗಿ ಹೆದ್ದಾರಿಯಲ್ಲಿ ಗಂಟೆಗಳ ಕಾಲ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ನ್ಯೂಯಾರ್ಕ್ ಗವರ್ನರ್ ಕ್ಯಾಥಿ ಹೊಚುಲ್ ಘಟನೆಯ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದು, ಅಗತ್ಯ ನೆರವು ನೀಡುವುದಾಗಿ ತಿಳಿಸಿದ್ದಾರೆ.