ಶಿವಕಾಶಿ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 4 ಸಾವು, 5 ಮಂದಿಗೆ ಗಾಯ
x
ಶಿವಕಾಶಿ ಪಟಾಕಿ ಸ್ಫೋಟ.

ಶಿವಕಾಶಿ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 4 ಸಾವು, 5 ಮಂದಿಗೆ ಗಾಯ

ತಮಿಳುನಾಡಿನ ಶಿವಕಾಶಿ ಸಮೀಪದ ಚಿನ್ನಕಾಮನ್‌ಪಟ್ಟಿಯಲ್ಲಿರುವ ಪಟಾಕಿ ಕಾರ್ಖಾನೆಯೊಂದರಲ್ಲಿ ಸೋಮವಾರ ಸಂಭವಿಸಿದ ಭಾರಿ ಸ್ಫೋಟದಲ್ಲಿ ಕನಿಷ್ಠ ನಾಲ್ವರು ಮೃತಪಟ್ಟು, ಐವರು ಗಾಯಗೊಂಡಿದ್ದಾರೆ.

ತಮಿಳುನಾಡಿನ ಶಿವಕಾಶಿ ಸಮೀಪದ ಚಿನ್ನಕಾಮನ್‌ಪಟ್ಟಿಯಲ್ಲಿರುವ ಪಟಾಕಿ ಕಾರ್ಖಾನೆಯೊಂದರಲ್ಲಿ ಸೋಮವಾರ ಸಂಭವಿಸಿದ ಭಾರಿ ಸ್ಫೋಟದಲ್ಲಿ ಕನಿಷ್ಠ ನಾಲ್ವರು ಮೃತಪಟ್ಟು, ಐವರು ಗಾಯಗೊಂಡಿದ್ದಾರೆ.

ಘಟನೆಯ ಕುರಿತು ವಿರುದುನಗರ್ ಜಿಲ್ಲಾ ಎಸ್‌ಪಿ ಕಣ್ಣನ್ ಅವರು ಎಎನ್‌ಐ ಸುದ್ದಿ ಸಂಸ್ಥೆಗೆ ಮಾಹಿತಿ ನೀಡಿದ್ದು, ಗಾಯಗೊಂಡವರನ್ನು ಚಿಕಿತ್ಸೆಗಾಗಿ ವಿರುದುನಗರ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ. ಸ್ಫೋಟದ ತೀವ್ರತೆ ಮತ್ತು ಅದಕ್ಕೆ ಕಾರಣಗಳ ಬಗ್ಗೆ ಹೆಚ್ಚಿನ ವಿವರಗಳು ಇನ್ನೂ ಲಭ್ಯವಾಗಿಲ್ಲ. ಪಟಾಕಿ ಕಾರ್ಖಾನೆಗಳಲ್ಲಿ ಸುರಕ್ಷತಾ ಮಾನದಂಡಗಳ ಬಗ್ಗೆ ಮತ್ತೊಮ್ಮೆ ಗಂಭೀರ ಪ್ರಶ್ನೆಗಳು ಎದ್ದಿವೆ.

Read More
Next Story