'ಸನಾತನ ಧರ್ಮ' ಹೇಳಿಕೆ: ಉದಯನಿಧಿ ಸ್ಟಾಲಿನ್‌ಗೆ ಜಾಮೀನು
ಬೆಂಗಳೂರು, ಜೂನ್ 25 - ಸನಾತನ ಧರ್ಮ ನಿರ್ಮೂಲನೆ ಮಾಡಿ ಎಂಬ ಹೇಳಿಕೆ ನೀಡಿದ್ದ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್‌ಗೆ ನಗರದ ನ್ಯಾಯಾಲಯ ಮಂಗಳವಾರ ಜಾಮೀನು ಮಂಜೂರು ಮಾಡಿದೆ.
ಸಾಮಾಜಿಕ ಕಾರ್ಯಕರ್ತ ಪರಮೇಶ್ ಅವರ ದೂರು ಆಧರಿಸಿ ಉದಯನಿಧಿ ಅವರಿಗೆ ನ್ಯಾಯಾಲಯ ನೋಟಿಸ್ ನೀಡಿತ್ತು. 42 ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಮುಂದೆ ಹಾಜರಾದ ಅವರಿಗೆ ಒಂದು ಲಕ್ಷ ರೂ. ಶ್ಯೂರಿಟಿಯೊಂದಿಗೆ ಜಾಮೀನು ನೀಡಲಾಯಿತು.
ಪ್ರಕರಣವನ್ನು ಆಗಸ್ಟ್ 8ಕ್ಕೆ ಮುಂದೂಡಲಾಗಿದೆ.
ಕ್ರೀಡಾ ಮತ್ತು ಯುವ ವ್ಯವಹಾರಗಳ ಖಾತೆ ಹೊಂದಿರುವ ಉದಯನಿಧಿ, ತಮಿಳುನಾಡು ಮುಖ್ಯಮಂತ್ರಿ ಮತ್ತು ಆಡಳಿತಾರೂಢ ಡಿಎಂಕೆ ಮುಖ್ಯಸ್ಥ ಎಂ.ಕೆ. ಸ್ಟಾಲಿನ್ ಅವರ ಪುತ್ರ.
ಸೆಪ್ಟೆಂಬರ್ 2023 ರಲ್ಲಿ ಚೆನ್ನೈನಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಉದಯನಿಧಿ, ಸನಾತನ ಧರ್ಮವು ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ವಿರುದ್ಧವಾಗಿದೆ. ಅದನ್ನು ಮಲೇರಿಯಾ ಮತ್ತು ಡೆಂಗ್ಯೂ ರೀತಿಯಲ್ಲಿ ನಿರ್ಮೂಲನೆ' ಮಾಡಬೇಕು ಎಂದು ಹೇಳಿದ್ದರು.
ಹೇಳಿಕೆಗೆ ವಿವಿಧ ವಲಯಗಳಿಂದ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು.