Union Minister Nitin Gadkari meets HDK, appeals for more funds for Mandya district
x

ಕೇಂದ್ರ ಸಚಿವರಾದ ಹೆಚ್‌.ಡಿ. ಕುಮಾರಸ್ವಾಮಿ ಹಾಗೂ ನಿತಿನ್‌ ಗಡ್ಕರಿ 

ಕೇಂದ್ರ ಸಚಿವ ನಿತಿನ್‌ ಗಡ್ಕರಿ - ಹೆಚ್‌ಡಿಕೆ ಭೇಟಿ; ಮಂಡ್ಯ ಜಿಲ್ಲೆಗೆ ಹೆಚ್ಚಿನ ಅನುದಾನಕ್ಕೆ ಮನವಿ

ಈಗಾಗಲೇ ಹಲವಾರು ಯೋಜನೆಗಳ ಬಗ್ಗೆ ಮನವಿ ಮಾಡಿದ್ದು, ಬಹುತೇಕ ಯೋಜನೆಗಳಿಗೆ ಹೆದ್ದಾರಿ ಸಚಿವರಿಂದ ಅನುಮೋದನೆ ದೊರೆತಿದೆ. ಉಳಿದ ಕೆಲವು ಯೋಜನೆಗಳ ಬಗ್ಗೆ ಸಚಿವರು ಹೆದ್ದಾರಿ ಸಚಿವರೊಂದಿಗೆ ಚರ್ಚಿಸಿದರು.


ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಹಾಲಿ ಹಾಗೂ ಭವಿಷ್ಯದ ಹೆದ್ದಾರಿ ಯೋಜನೆಗಳ ಬಗ್ಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.

ಗುರುವಾರ ನವದೆಹಲಿಯಲ್ಲಿರುವ ಗಡ್ಕರಿ ಅವರ ನಿವಾಸಕ್ಕೆ ತಮ್ಮ ಆಪ್ತ ಅಧಿಕಾರಿಗಳ ಜತೆ ತೆರಳಿ ಭೇಟಿ ಮಾಡಿದ ಸಚಿವ ಕುಮಾರಸ್ವಾಮಿ ಅವರು, ಈಗಾಗಲೇ ಮಂಡ್ಯ ಜಿಲ್ಲೆಯಲ್ಲಿ ಕಾರ್ಯಗತವಾಗುತ್ತಿರುವ ಹೆದ್ದಾರಿ ಯೋಜನೆಗಳ ಬಗ್ಗೆ ಸಮಾಲೋಚನೆ ನಡೆಸಿದರು.

ಈಗಾಗಲೇ ಹಲವಾರು ಯೋಜನೆಗಳ ಬಗ್ಗೆ ಮನವಿ ಮಾಡಿದ್ದು, ಬಹುತೇಕ ಯೋಜನೆಗಳಿಗೆ ಹೆದ್ದಾರಿ ಸಚಿವರಿಂದ ಅನುಮೋದನೆ ದೊರೆತಿದೆ. ಉಳಿದ ಕೆಲವು ಯೋಜನೆಗಳ ಬಗ್ಗೆ ಸಚಿವರು ಹೆದ್ದಾರಿ ಸಚಿವರೊಂದಿಗೆ ಚರ್ಚಿಸಿದರು. ಇದೇ ವೇಳೆ ಪಾಂಡವಪುರ ಸಕ್ಕರೆ ಕಾರ್ಖಾನೆ ಸಮೀಪದ ಸಿಡಿಎಸ್ ಕಾಲುವೆಯಿಂದ ದರ್ಶಗುಪ್ಪೆ ನೀರು ಸಂಸ್ಕರಣಾ ಘಟಕದವರೆಗೂ ನಾಲ್ಕು ಪಥದ ಹೆದ್ದಾರಿಯ ಅಭಿವೃದ್ಧಿಗೆ ಅಗತ್ಯವಿರುವ ಹೆಚ್ಚುವರಿ ಅನುದಾನಕ್ಕೆ ನಿತಿನ್ ಗಡ್ಕರಿ ಅನುಮೋದನೆ ನೀಡಿದ್ದಾರೆ.

ಗೃಹಸಚಿವ ಅಮಿತ್‌ ಶಾ ಭೇಟಿ ಮಾಡಿದ ಹೆಚ್‌ಡಿಕೆ

ಕೋಲಾರದ ಸಂಸದ ಮಲ್ಲೇಶ್‌ ಅವರ ಜತೆ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿ ಮಾಡಿ ರಾಜ್ಯ ಮತ್ತು ರಾಷ್ಟ್ರಕ್ಕೆ ಸಂಬಂಧಿಸಿದ ಮಹತ್ವದ ವಿಷಯಗಳು ಹಾಗೂ ಅಭಿವೃದ್ಧಿಗಳ ಬಗ್ಗೆ ಚರ್ಚೆ ನಡೆಸಲಾಯಿತು ಎಂದು ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.

Read More
Next Story