ಮಾನನಷ್ಟ: ಜುಲೈ 26 ರಂದು ಖುದ್ದು ಹಾಜರಾಗಲು ರಾಹುಲ್ ಗಾಂಧಿಗೆ ಸಮನ್ಸ್
x

ಮಾನನಷ್ಟ: ಜುಲೈ 26 ರಂದು ಖುದ್ದು ಹಾಜರಾಗಲು ರಾಹುಲ್ ಗಾಂಧಿಗೆ ಸಮನ್ಸ್


ಸುಲ್ತಾನ್‌ಪುರ (ಯುಪಿ): ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧದ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ, ಜುಲೈ 26 ರಂದು ಖುದ್ದು ಹಾಜರಾಗುವಂತೆ ಸಂಸದ-ಶಾಸಕ ನ್ಯಾಯಾಲಯ ಮಂಗಳವಾರ ಹೇಳಿದೆ.

ರಾಹುಲ್ ಗಾಂಧಿ ಅವರು ಮಂಗಳವಾರ ನ್ಯಾಯಾಲಯದ ಮುಂದೆ ಹಾಜರಾಗಬೇಕಿತ್ತು. ಆದರೆ, ಸಂಸತ್ತಿನ ಅಧಿವೇಶನದ ಕಾರಣ ಅದು ಸಾಧ್ಯವಾಗಲಿಲ್ಲ. ಅವರು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದಾರೆ.

ನ್ಯಾಯಾಲಯದಲ್ಲಿ ಹಾಜರಿದ್ದ ರಾಹುಲ್ ಗಾಂಧಿ ಪರ ವಕೀಲ ಕಾಶಿ ಪ್ರಸಾದ್ ಶುಕ್ಲಾ ಅವರು ಪ್ರಕರಣದ ವಿಚಾರಣೆಗೆ ಹೊಸ ದಿನಾಂಕ ಕೋರಿ ದರು. ಅರ್ಜಿಯನ್ನು ಪರಿಗಣಿಸಿದ ನ್ಯಾಯಾಧೀಶ ಶುಭಂ ವರ್ಮಾ ಅವರು‌, ಜುಲೈ 26 ರಂದು ಖುದ್ದು ಹಾಜರಾಗಲು ಹೇಳಿದರು ಎಂದು ಶುಕ್ಲಾ ಹೇಳಿದರು.

2018ರಲ್ಲಿ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ಕುರಿತು ರಾಹುಲ್‌ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿತ್ತು. ಬಿಜೆಪಿ ನಾಯಕ ವಿಜಯ್ ಮಿಶ್ರಾ ಅವರು ಮಾನನಷ್ಟ ದೂರು ದಾಖಲಿಸಿದ್ದಾರೆ.

ಫೆಬ್ರವರಿ 20 ರಂದು ಅಮೇಥಿಯಲ್ಲಿ ರಾಹುಲ್ ತಮ್ಮ ‌ʻಭಾರತ್ ಜೋಡೋ ನ್ಯಾಯ್ ಯಾತ್ರೆʼ ಸ್ಥಗಿತಗೊಳಿಸಿ, ನ್ಯಾಯಾಲಯಕ್ಕೆ ಹಾಜರಾಗಿದ್ದರು. ಕೋರ್ಟ್‌ ಅವರಿಗೆ ಜಾಮೀನು ನೀಡಿತು.

Read More
Next Story