ಉತ್ತರ ಪ್ರದೇಶ: ಸಂಭಾಲ್ ಸಂಸದ ಶಫೀಕರ್ ರೆಹಮಾನ್ ಬರ್ಕ್ ನಿಧನ
x

ಉತ್ತರ ಪ್ರದೇಶ: ಸಂಭಾಲ್ ಸಂಸದ ಶಫೀಕರ್ ರೆಹಮಾನ್ ಬರ್ಕ್ ನಿಧನ


ಲಕ್ನೋ: ಸಮಾಜವಾದಿ ಪಕ್ಷದ ಸಂಭಾಲ್‌ ಸಂಸದ ಶಫೀಕರ್ ರಹಮಾನ್ ಬಾರ್ಕ್(93) ಅವರು ಮಂಗಳವಾರ ನಿಧನರಾಗಿದ್ದಾರೆ ಎಂದು ಪಕ್ಷ ತಿಳಿಸಿದೆ.

ದೀರ್ಘಕಾಲದ ಅನಾರೋಗ್ಯದಿಂದಾಗಿ ಬಳಲುತ್ತಿದ್ದ ಶಫೀಕರ್ ರಹಮಾನ್ ಬಾರ್ಕ್ ಅವರನ್ನು ಮೊರಾದಾಬಾದ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿಯೇ ಇಂದು ಅವರು ಕೊನೆಯುಸಿರೆಳೆದಿದ್ದಾರೆ.

ನಾಲ್ಕು ಬಾರಿ ಶಾಸಕರಾಗಿದ್ದ ಬಾರ್ಕ್ ಅವರು 2019ರಲ್ಲಿ ಸಂಭಾಲ್‌ನಿಂದ ಸಂಸದರಾಗಿ ಆಯ್ಕೆಯಾಗಿದ್ದರು.

ಅವರ ನಿಧನದ ಸುದ್ದಿಯನ್ನು Xನಲ್ಲಿ ಪೋಸ್ಟ್‌ ಮಾಡಿರುವ ಸಮಾಜವಾದಿ ಪಕ್ಷ, "ಸಮಾಜವಾದಿ ಪಕ್ಷದ ಹಿರಿಯ ನಾಯಕ ಹಾಗೂ ಸಂಸದರಾದ ಶಫೀಕರ್ ರಹಮಾನ್ ಬರ್ಕ್ ಸಾಹೇಬ್ ಅವರ ನಿಧನವು ಅತ್ಯಂತ ದುಃಖಕರ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅಗಲಿದ ಕುಟುಂಬ ಸದಸ್ಯರಿಗೆ ದುಃಖವನ್ನು ಭರಿಸುವ ಶಕ್ತಿ ಸಿಗಲಿ ಎಂದು ಶ್ರದ್ದಾಂಜಲಿ ಅರ್ಪಿಸಿದೆ.

Read More
Next Story