ನಟ, ಸಂಸದ ಸುರೇಶ್ ಗೋಪಿ ಮನೆಯಲ್ಲಿ ಕಳ್ಳತನ; ಇಬ್ಬರ ಬಂಧನ
x
ಸುರೇಶ್ ಗೋಪಿ

ನಟ, ಸಂಸದ ಸುರೇಶ್ ಗೋಪಿ ಮನೆಯಲ್ಲಿ ಕಳ್ಳತನ; ಇಬ್ಬರ ಬಂಧನ

ಆರೋಪಿಗಳನ್ನು ಬಂಧಿಸಿ ಕೇಸ್​ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಗೋಪಿ ಅವರ ಕುಟುಂಬ ಸದಸ್ಯರು ಮನೆಯಿಂದ ಹೊರಗೆ ಹೋಗಿದ್ದ ವೇಳೆ ಈ ಘಟನೆ ನಡೆದಿದೆ.

ಕೇಂದ್ರ ಸಚಿವ ಸುರೇಶ್ ಗೋಪಿ ಅವರ ಮನೆಯಲ್ಲಿ ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಎರವಿಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಗೋಪಿ ಅವರ ಮನೆಯ ಬಳಿಯ ಶೆಡ್ ನಿಂದ ಹಳೆಯ ವಸ್ತುಗಳನ್ನು ಕಳವು ಮಾಡಿದ ಪ್ರಕರಣದ ತನಿಖೆಯ ಭಾಗವಾಗಿ 18 ಮತ್ತು 20 ವರ್ಷದ ಶಂಕಿತರನ್ನು ಒಂದು ದಿನದ ಹಿಂದೆ ವಶಕ್ಕೆ ತೆಗೆದುಕೊಳ್ಳಲಾಗಿದೆ.

ಆರೋಪಿಗಳನ್ನು ಬಂಧಿಸಿ ಕೇಸ್​ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಗೋಪಿ ಅವರ ಕುಟುಂಬ ಸದಸ್ಯರು ಮನೆಯಿಂದ ಹೊರಗೆ ಹೋಗಿದ್ದ ವೇಳೆ ಈ ಘಟನೆ ನಡೆದಿದೆ.

ಘಟನೆಯ ಬಗ್ಗೆ ವಿವರವಾದ ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದು ಅವರು ಹೇಳಿದರು. ಪಿಟಿಐ

Read More
Next Story