ವಯನಾಡ್ ಉಪಚುನಾವಣೆ | ಅ.22 ರಂದು ಪ್ರಿಯಾಂಕಾ ನಾಮಪತ್ರ ಸಲ್ಲಿಕೆ
x
ಪ್ರಿಯಾಂಕಾ ಗಾಂಧಿ

ವಯನಾಡ್ ಉಪಚುನಾವಣೆ | ಅ.22 ರಂದು ಪ್ರಿಯಾಂಕಾ ನಾಮಪತ್ರ ಸಲ್ಲಿಕೆ

ಬುಧವಾರ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರು ಕಲ್ಪೆಟ್ಟಾ ಹೊಸ ಬಸ್ ನಿಲ್ದಾಣದಿಂದ ರೋಡ್ ಶೋ ನಡೆಸಲಿದ್ದಾರೆ.


Click the Play button to hear this message in audio format

ವಯನಾಡ್ ಲೋಕಸಭಾ ಉಪಚುನಾವಣೆಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಬುಧವಾರ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಈ ಸಂದರ್ಭದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಮಾಜಿ ಮುಖ್ಯಸ್ಥರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಕೂಡ ಅವರಿಗೆ ಸಾಥ್‌ ನೀಡಲಿದ್ದಾರೆ ಎನ್ನಲಾಗಿದೆ.

ನಾಮಪತ್ರ ಸಲ್ಲಿಕೆಗೂ ಮುನ್ನ ಪ್ರಿಯಾಂಕಾ ಗಾಂಧಿ ಸೋಮವಾರ ಹೊಸದಿಲ್ಲಿಯಲ್ಲಿ ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಬುಧವಾರ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರು ಕಲ್ಪೆಟ್ಟಾ ಹೊಸ ಬಸ್ ನಿಲ್ದಾಣದಿಂದ ಬೆಳಿಗ್ಗೆ 11 ಗಂಟೆಗೆ ರೋಡ್ ಶೋ ನಡೆಸಲಿದ್ದಾರೆ. ಅಕ್ಟೋಬರ್ 23 ರಂದು ಮಧ್ಯಾಹ್ನ 12 ಗಂಟೆಗೆ ಜಿಲ್ಲಾಧಿಕಾರಿಗಳ ಮುಂದೆ ನಾಮಪತ್ರ ಸಲ್ಲಿಸಲಾಗುವುದು ಎಂದು ಪಕ್ಷದ ಮೂಲಗಳು ತಿಳಿಸಿವೆ.

ಪ್ರಿಯಾಂಕಾ ಗಾಂಧಿ ಯುಡಿಎಫ್ ಅಭ್ಯರ್ಥಿ

ಚುನಾವಣಾ ಆಯೋಗವು (EC) ಕಳೆದ ವಾರ ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆಯನ್ನು ಘೋಷಿಸಿದೆ. ಇದು ಕೇರಳ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿಯವರ ಚುನಾವಣಾ ಚೊಚ್ಚಲ ಪ್ರವೇಶಕ್ಕೆ ವೇದಿಕೆಯಾಗಿದೆ. ಅದು ಸಕ್ರಿಯ ರಾಜಕೀಯಕ್ಕೆ ಧುಮುಕಿದ ಐದು ವರ್ಷಗಳ ನಂತರ ಅವರು ಸಂಸತ್‌ ಚುನಾವಣೆಯ ಕಣಕ್ಕೆ ಇಳಿಯುತ್ತಿದ್ದಾರೆ. ಚುನಾವಣಾ ಆಯೋಗ ಉಪಚುನಾವಣೆಯನ್ನು ಘೋಷಿಸಿದ ಕೂಡಲೇ, ಕೇರಳದ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ (52) ಅವರು ತಮ್ಮ ಅಭ್ಯರ್ಥಿಯಾಗಲಿದ್ದಾರೆ ಎಂದು ಕಾಂಗ್ರೆಸ್ ಘೋಷಿಸಿತ್ತು.

ಲೋಕಸಭೆ ಚುನಾವಣೆಯ ಕೆಲವು ದಿನಗಳ ನಂತರ ರಾಹುಲ್ ಗಾಂಧಿಯವರು ಉತ್ತರ ಪ್ರದೇಶದ ರಾಯ್ ಬರೇಲಿ ಲೋಕಸಭಾ ಕ್ಷೇತ್ರವನ್ನು ತಮ್ಮ ಕ್ಷೇತ್ರವನ್ನಾಗಿ ಉಳಿಸಿಕೊಳ್ಳುತ್ತಾರೆ. ಕೇರಳದ ವಯನಾಡ್ ಕ್ಷೇತ್ರವನ್ನು ರಾಹುಲ್ ಗಾಂಧಿಯವರು ತೆರವು ಮಾಡುತ್ತಾರೆ. ಅವರ ಸಹೋದರಿ ಪ್ರಿಯಾಂಕಾ ಗಾಂಧಿ ಅವರು ಚುನಾವಣಾ ಪಾದಾರ್ಪಣೆ ಮಾಡಲಿದ್ದಾರೆ ಎಂದು ಕಾಂಗ್ರೆಸ್ ಜೂನ್‌ನಲ್ಲಿ ಘೋಷಿಸಿತ್ತು.

ಚುನಾವಣಾ ಆಯೋಗ ಕಳೆದ ಮಂಗಳವಾರ ವಯನಾಡ್ ಮತ್ತು ನಾಂದೇಡ್ ಲೋಕಸಭಾ ಸ್ಥಾನಗಳಿಗೆ ಹಾಗೂ 48 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಿಸಿದೆ. ಜಾರ್ಖಂಡ್ ವಿಧಾನಸಭೆಗೆ ಮೊದಲ ಹಂತದ ಮತದಾನದ ಜೊತೆಗೆ ವಯನಾಡ್ ಸಂಸದೀಯ ಸ್ಥಾನ ಮತ್ತು 47 ವಿಧಾನಸಭಾ ಸ್ಥಾನಗಳಿಗೆ ನವೆಂಬರ್ 13 ರಂದು ಉಪಚುನಾವಣೆ ನಡೆಯಲಿದೆ. ನವೆಂಬರ್ 23 ರಂದು ಫಲಿತಾಂಶ ಪ್ರಕಟವಾಗಲಿದೆ.

ರಾಹುಲ್ ಸತತ ಎರಡು ಚುನಾವಣೆಗಳಲ್ಲಿ ಗೆದ್ದಿರುವ ವಯನಾಡ್ ಲೋಕಸಭಾ ಕ್ಷೇತ್ರದಿಂದ ಉಪ ಚುನಾವಣೆಗೆ ಪ್ರಿಯಾಂಕಾ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ನಿರ್ಧರಿಸಿದೆ. ಈ ಹಿಂದೆ ಪ್ರಿಯಾಂಕಾ ಗಾಂಧಿ ಉತ್ತರ ಪ್ರದೇಶದ ಕಾಂಗ್ರೆಸ್ ಉಸ್ತುವಾರಿಯಾಗಿದ್ದರು. ಅವರು ಪಕ್ಷದ ಕಾರ್ಯತಂತ್ರಗಾರ ಮತ್ತು ಸ್ಟಾರ್ ಪ್ರಚಾರಕಿಯಾಗಿ ಕೆಲಸ ನಿರ್ವಹಿಸುತ್ತಿದ್ದರು. ಕೆಲವು ರಾಜ್ಯಗಳಲ್ಲಿ ಮತ್ತು ವರ್ಷದ ಆರಂಭದಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವಲ್ಲಿ ಪ್ರಿಯಾಂಕ ಗಾಂಧಿ ಪಾತ್ರ ವಹಿಸಿದ್ದಾರೆ.

Read More
Next Story