Wayanad Tragedy| ಬ್ಯಾಂಕ್‌ಗಳ ಮೂಲಕ ಪರಿಹಾರ ವಿತರಿಸಿ: ಕೇರಳ ಹೈಕೋರ್ಟ್‌
x
ವಯನಾಡ್ ಭೂಕುಸಿತದ ಸಂತ್ರಸ್ತರಿಗೆ ಬ್ಯಾಂಕ್‌ಗಳ ಮೂಲಕ ಪರಿಹಾರವನ್ನು ವಿತರಿಸುವಂತೆ ಕೇರಳ ಹೈಕೋರ್ಟ್ ಕೇರಳ ಸರ್ಕಾರಕ್ಕೆ ಆದೇಶ ನೀಡಿದೆ.

Wayanad Tragedy| ಬ್ಯಾಂಕ್‌ಗಳ ಮೂಲಕ ಪರಿಹಾರ ವಿತರಿಸಿ: ಕೇರಳ ಹೈಕೋರ್ಟ್‌

ವಯನಾಡ್ ಭೂಕುಸಿತದ ಸಂತ್ರಸ್ತರಿಗೆ ಇನ್ನೂ ಪರಿಹಾರ ಸಿಕ್ಕಿಲ್ಲ ಎಂಬ ವರದಿಗಳು ಬಂದ ಹಿನ್ನಲೆಯಲ್ಲಿ ಕೇರಳ ಹೈಕೋರ್ಟ್ ಖಜಾನೆ ಅಥವಾ ಬ್ಯಾಂಕ್ ಖಾತೆಗಳ ಮೂಲಕ ಹಣಕಾಸಿನ ನೆರವು ವಿತರಿಸಲು ಕಾರ್ಯವಿಧಾನವನ್ನು ಸ್ಥಾಪಿಸಲು ಸರ್ಕಾರಕ್ಕೆ ಬುಧವಾರ ಸೂಚಿಸಿದೆ.


Click the Play button to hear this message in audio format

ವಯನಾಡ್ ಭೂಕುಸಿತದ ಸಂತ್ರಸ್ತರಿಗೆ ಇನ್ನೂ ಪರಿಹಾರ ಸಿಕ್ಕಿಲ್ಲ ಎಂಬ ವರದಿಗಳು ಬಂದ ಹಿನ್ನಲೆಯಲ್ಲಿ ಕೇರಳ ಹೈಕೋರ್ಟ್ ಖಜಾನೆ ಅಥವಾ ಬ್ಯಾಂಕ್ ಖಾತೆಗಳ ಮೂಲಕ ಹಣಕಾಸಿನ ನೆರವು ವಿತರಿಸುವ ಕಾರ್ಯವಿಧಾನವನ್ನು ಅನುಸರಿಸಲು ಸರ್ಕಾರಕ್ಕೆ ಬುಧವಾರ ಸೂಚಿಸಿದೆ.

ಜುಲೈ 30 ರಂದು ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದ ಪ್ರಕರಣದ ಹೈಕೋರ್ಟ್ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿಗಳಾದ ಎಕೆ ಜಯಶಂಕರನ್ ನಂಬಿಯಾರ್ ಮತ್ತು ಶ್ಯಾಮ್ ಕುಮಾರ್ ವಿಎಂ ಅವರ ಪೀಠವು ಈ ನಿರ್ದೇಶನ ನೀಡಿದೆ.

ಈ ದುರಂತವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವ ಕುರಿತು ಉನ್ನತಾಧಿಕಾರ ಸಮಿತಿ ಪರಿಶೀಲನೆ ನಡೆಸುತ್ತಿದೆ ಎಂದು ವಿಚಾರಣೆ ವೇಳೆ ಕೇಂದ್ರ ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿದೆ. ವಿಪತ್ತು ಸಂತ್ರಸ್ತರಿಗೆ ದಿನಕ್ಕೆ 300 ರೂಪಾಯಿ ನೀಡುವ ಯೋಜನೆಯನ್ನು ಇನ್ನೂ 30 ದಿನಗಳವರೆಗೆ ವಿಸ್ತರಿಸಲಾಗುತ್ತಿದೆ ಎಂದು ರಾಜ್ಯ ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿದೆ. ಎಲ್ಲವನ್ನು ಆಲಿಸಿದ ನ್ಯಾಯಾಲಯವು ನವೆಂಬರ್ 15 ರಂದು ಮುಂದಿನ ತೀರ್ಪಿಗೆ ವಿಷಯವನ್ನು ಪಟ್ಟಿ ಮಾಡಿದೆ.

Read More
Next Story