
ಬೆಂಕಿ ಅನಾಹುತ ನಡೆದ ಪ್ರದೇಶದ ಚಿತ್ರಗಳು.
ಕೋಲ್ಕತಾದ ಹೋಟೆಲ್‌ನಲ್ಲಿ ಅಗ್ನಿ ದುರಂತ: 14 ಮಂದಿ ಸಾವು
ಘಟನೆಯ ಮಾಹಿತಿ ಬಂದ ತಕ್ಷಣ ಅಗ್ನಿ ಶಾಮಕ ದಳದ ತಂಡ ಮತ್ತು ಪೊಲೀಸರು ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಹೋಟೆಲ್‌ನ ಕೊಠಡಿಗಳು ಮತ್ತು ಚಾವಣಿಗಳಲ್ಲಿ ಸಿಲುಕಿ ಹಾಕಿಕೊಂಡಿದ್ದ ಜನರನ್ನು ಮೊದಲು ರಕ್ಷಿಸಲಾಗಿದೆ.
ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತಾದ ಮಚುವಾಪಟ್ಟಿ ಪ್ರದೇಶದಲ್ಲಿ ಇರುವ ಋತುರಾಜ್ ಹೋಟೆಲ್‌ನಲ್ಲಿ ಮಂಗಳವಾರ ರಾತ್ರಿ ಭೀಕರ ಆಗ್ನೇಯ ಉಂಟಾಗಿದ್ದು, 14 ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಆಯುಕ್ತ ಮನೋಜ್ ವರ್ಮಾ ತಿಳಿಸಿದ್ದಾರೆ.
ರಾತ್ರಿ ಸುಮಾರು 8.15ರ ಸಮಯದಲ್ಲಿ ಘಟನೆ ನಡೆದಿದ್ದು, 13ಮಂದಿ ಗಾಯಗೊಂಡಿದ್ದಾರೆ. ಈ ದುರಂತದ ಬಗ್ಗೆ ತನಿಖೆ ನಡೆಸಲು ವಿಶೇಷ ತನಿಖಾ ತಂಡ ರಚಿಸಲಾಗಿದೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ. ಘಟನೆಯ ಮಾಹಿತಿ ಬಂದ ತಕ್ಷಣ ಅಗ್ನಿ ಶಾಮಕ ದಳದ ತಂಡ ಮತ್ತು ಪೊಲೀಸರು ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಹೋಟೆಲ್‌ನ ಕೊಠಡಿಗಳು ಮತ್ತು ಚಾವಣಿಗಳಲ್ಲಿ ಸಿಲುಕಿ ಹಾಕಿಕೊಂಡಿದ್ದ ಜನರನ್ನು ಮೊದಲು ರಕ್ಷಿಸಲಾಗಿದೆ.
ಬೆಂಕಿಯ ತೀವ್ರತೆಯಿಂದಾಗಿ ಹಲವರು ಜೀವ ಉಳಿಸಿಕೊಳ್ಳಲು ಕಿಟಕಿಗಳ ಮೂಲಕ ಹಾರಿ ಮೃತಪಟ್ಟರೆ ಇನ್ನೂ ಕೆಲವರು ಒಳಗೆ ಉಸಿರುಗಟ್ಟಿ ಮೃತಪಟ್ಟಿದ್ದಾರೆ.
ಪೊಲೀಸ್ ಆಯುಕ್ತ ಮನೋಜ್ ವರ್ಮಾ ಅವರು ನೀಡಿರುವ ಮಾಹಿತಿಯಂತೆ , "ಬೆಂಕಿಗೆ ಕಾರಣ ಇನ್ನೂ ಸ್ಪಷ್ಟವಾಗಿಲ್ಲ, ಆದರೆ ತನಿಖಾ ತಂಡ ಈಗಾಗಲೇ ಕಾರ್ಯ ಪ್ರಾರಂಭಿಸಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಗಾಯಾಳುಗಳ ಚಿಕಿತ್ಸೆಗೆ ನೀಡಲಾಗುತ್ತಿದೆ. ಪಶ್ಚಿಮ ಬಂಗಾಳ ಸರ್ಕಾರವು ಈ ದುರಂತಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆಗೆ ಮುಂದಾಗಿದೆ.
ಈ ಘಟನೆಗೆ ಪ್ರತಿಕ್ರಿಯಿಸಿದ ಪಶ್ಚಿಮ ಬಂಗಾಳ ಕಾಂಗ್ರೆಸ್ ಅಧ್ಯಕ್ಷ ಸುಭಂಕರ್ ಸರ್ಕಾರ್ ಅವರು ಕೋಲ್ಕತ್ತಾ ಕಾರ್ಪೊರೇಷನ್‌ನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಇದೊಂದು ದುರಂತ ಘಟನೆ. ಹೋಟೆಲ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇನ್ನೂ ಹಲವರು ಕಟ್ಟಡದಲ್ಲಿ ಸಿಲುಕಿಕೊಂಡಿದ್ದಾರೆ. ಯಾವುದೇ ಸುರಕ್ಷತಾ ಅಥವಾ ಭದ್ರತಾ ಕ್ರಮಗಳಿರಲಿಲ್ಲ. ಕಾರ್ಪೊರೇಷನ್ ಏನು ಮಾಡುತ್ತಿದೆ ಎಂದು ಗೊತ್ತಿಲ್ಲ" ಎಂದು ಸುಭಂಕರ್ ಸರ್ಕಾರ್ ತಿಳಿಸಿದ್ದಾರೆ.