ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಪಡಿಸಲು ಮೋದಿಗೇನು ಅಡ್ಡಿ?
ತಮ್ಮ ವಿರುದ್ಧದ ಲೈಂಗಿಕ ಆರೋಪದ ಕುರಿತು ತನಿಖೆಗೆ ಆದೇಶಿಸುವಂತೆ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದ ಬೆನ್ನಲ್ಲೇ, 33 ವರ್ಷದ ಹಾಸನ ಸಂಸದರು ಜರ್ಮನಿಗೆ ಹಾರಿದ್ದಾರೆ ಎಂದು ವರದಿಯಾಗಿದೆ.
ಲೈಂಗಿಕ ದೌರ್ಜನ್ಯ ಆರೋಪದ ಹಿನ್ನೆಲೆಯಲ್ಲಿ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಗೊಳಿಸುವುದಕ್ಕೆ ಏನು ಅಡ್ಡಿ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಶನಿವಾರ ಸರ್ಕಾರವನ್ನು ಪ್ರಶ್ನಿಸಿದ್ದಾರೆ.
ತಮ್ಮ ವಿರುದ್ಧದ ಲೈಂಗಿಕ ಆರೋಪದ ಕುರಿತು ತನಿಖೆಗೆ ಆದೇಶಿಸುವಂತೆ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದ ಬೆನ್ನಲ್ಲೇ, 33 ವರ್ಷದ ಹಾಸನ ಸಂಸದರು ಜರ್ಮನಿಗೆ ಹಾರಿದ್ದಾರೆ ಎಂದು ವರದಿಯಾಗಿದೆ.
ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಜೈರಾಮ್ ರಮೇಶ್, ಪ್ರಜ್ವಲ್ ತಪ್ಪಿಸಿಕೊಳ್ಳಲು ಹೇಗೆ ಅವಕಾಶ ನೀಡಲಾಯಿತು ಎಂದು ಪ್ರಶ್ನಿಸಿದ್ದಾರೆ.
"ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಪಡಿಸಲು ಪ್ರಧಾನಿಗೆ ಏನು ಅಡ್ಡಿಯಾಗಿದೆ? ವಿಜಯ್ ಮಲ್ಯ, ನೀರವ್ ಮೋದಿ ಮತ್ತು ಮೆಹುಲ್ ಚೋಕ್ಸಿ ಅವರಂತೆ ದೇಶದಿಂದ ಪಲಾಯನ ಮಾಡಲು ಹೇಗೆ ಮತ್ತು ಏಕೆ ಅವರಿಗೆ ಅವಕಾಶ ನೀಡಲಾಯಿತು?" ಎಂದು ಅವರು ಪ್ರಶ್ನಿಸಿದ್ದಾರೆ.
ಪ್ರಜ್ವಲ್ ಅವರು ರಾಜತಾಂತ್ರಿಕ ಪಾಸ್‌ಪೋರ್ಟ್‌ನಲ್ಲಿ ಜರ್ಮನಿಗೆ ಪ್ರಯಾಣಿಸಿದ್ದಾರೆ ಮತ್ತು ಪ್ರವಾಸಕ್ಕೆ ರಾಜಕೀಯ ಅನುಮತಿಯನ್ನು ಪಡೆದಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (ಎಂಇಎ) ಮೇ 2 ರಂದು ತಿಳಿಸಿದೆ. ಹಾಸನ ಸಂಸದರ ವಿರುದ್ಧ ಇಂಟರ್‌ಪೋಲ್‌ನ ಬ್ಲೂ ಕಾರ್ನರ್ ನೋಟಿಸ್ ಕೂಡ ಜಾರಿಯಾಗಿದೆ.
ಜನತಾ ದಳ (ಜಾತ್ಯತೀತ) ಅಧಿನಾಯಕ ಮತ್ತು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ಮೊಮ್ಮಗ ಪ್ರಜ್ವಲ್ ಅವರು ಅನೇಕ ಮಹಿಳೆಯರೊಂದಿಗೆ ಕಾಣಿಸಿಕೊಂಡಿರುವ ಹಲವಾರು ವೀಡಿಯೊಗಳು ಹೊರಬಂದ ನಂತರ ಲೈಂಗಿಕ ದೌರ್ಜನ್ಯದ ಆರೋಪ ಕೇಳಿಬಂದಿದೆ. ಏಪ್ರಿಲ್ 26 ರಂದು ಚುನಾವಣೆ ನಡೆದ ಹಾಸನ ಲೋಕಸಭಾ ಕ್ಷೇತ್ರದಿಂದ ಎನ್‌ಡಿಎ ಅಭ್ಯರ್ಥಿಯಾಗಿದ್ದಾರೆ.