J and K Polls| ರಾಜ್ಯ ಸ್ಥಾನಮಾನ ಮರುಸ್ಥಾಪನೆಗೆ ಒತ್ತಡ: ರಾಹುಲ್ ಗಾಂಧಿ
ಪೂಂಚ್ ಜಿಲ್ಲೆಯ ಸುರನ್‌ಕೋಟೆಯಲ್ಲಿ ರಾಹುಲ್ ಗಾಂಧಿ ಅವರು ಚುನಾವಣೆ ಪ್ರಚಾರ ನಡೆಸಿದರು
ಸುರನ್‌ಕೋಟೆ (ಜಮ್ಮು-ಕಾಶ್ಮೀರ): ಒಂದುವೇಳೆ ಜಮ್ಮು-ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ಮರುಸ್ಥಾಪಿಸಲು ಕಾಂಗ್ರೆಸ್ ವಿಫಲವಾದರೆ, ಕೇಂದ್ರದ ಮೇಲೆ ಒತ್ತಡ ಹೇರಲಿದೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೋಮವಾರ ಹೇಳಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಇಂಡಿಯ ಒಕ್ಕೂಟವು ʻಪ್ರಧಾನಿ ನರೇಂದ್ರ ಮೋದಿಯವರ ಮನೋಬಲವನ್ನು ಮುರಿದಿದೆʼ ಎಂದು ಅವರು ಹೇಳಿದ್ದಾರೆ.
ʻದೇಶದ ಇತಿಹಾಸದಲ್ಲಿ ರಾಜ್ಯವೊಂದನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಿರುವುದು ಇದೇ ಮೊದಲು. ನಿಮ್ಮ ಪ್ರಜಾಸತ್ತಾತ್ಮಕ ಹಕ್ಕನ್ನು ಕಸಿದುಕೊಳ್ಳಲಾಗಿದೆ. ರಾಜ್ಯತ್ವ ಮರುಸ್ಥಾಪಿಸುವಿಕೆಗೆ ಆದ್ಯತೆ ನೀಡಲಾಗುತ್ತದೆ,ʼ ಎಂದು ಪೂಂಚ್ ಜಿಲ್ಲೆಯ ಸುರನ್‌ಕೋಟೆ ಪ್ರದೇಶದಲ್ಲಿ ಕಾಂಗ್ರೆಸ್-ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿಕೂಟದ ಅಭ್ಯರ್ಥಿಗಳ ಪರ ಪ್ರಚಾರ ಮಾಡಿದರು.
ʻಜಮ್ಮು-ಕಾಶ್ಮೀರವನ್ನು ದೆಹಲಿ ಆಳುತ್ತಿದೆ; ಹೊರಗಿನವರು ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ. ಧರ್ಮ, ಜಾತಿ, ಪಂಥ ಮತ್ತು ಪ್ರದೇಶದ ಹೆಸರಿನಲ್ಲಿ ಜನರನ್ನು ವಿಭಜಿಸುತ್ತಿರುವ ಆರ್‌ಎಸ್‌ಎಸ್-ಬಿಜೆಪಿ ದ್ವೇಷವನ್ನು ಹರಡುತ್ತಿವೆ. ಅವರನ್ನು ಎದುರಿಸಲು ಕಾಂಗ್ರೆಸ್ ʻದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿʼಗಳನ್ನು ತೆರೆದಿದೆ ಎಂದು ಹೇಳಿದರು.
90 ಸದಸ್ಯ ಬಲದ ಜಮ್ಮು-ಕಾಶ್ಮೀರ ವಿಧಾನಸಭೆಗೆ ಮೂರು ಹಂತದ ಚುನಾವಣೆ ನಡೆಯುತ್ತಿದೆ. ಮೊದಲ ಹಂತದ ಚುನಾವಣೆ ಮುಗಿದಿದ್ದು, ಬುಧವಾರ ಎರಡನೆಯ ಮತ್ತು ಅಕ್ಟೋಬರ್ 1 ರಂದು ಮೂರನೇ ಹಂತದ ಮತದಾನ ನಡೆಯಲಿದೆ. ಅಕ್ಟೋಬರ್ 8 ರಂದು ಫಲಿತಾಂಶ ಪ್ರಕಟವಾಗಲಿದೆ.