ಯಡಿಯೂರಪ್ಪ ವಿರುದ್ಧ ಜಾಮೀನುರಹಿತ ವಾರೆಂಟ್ ಜಾರಿ: ಬಂಧನಕ್ಕೆ ಕ್ಷಣಗಣನೆ
ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪಗೆ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ. ಪೋಕ್ಸೊ ಕೇಸ್ನಲ್ಲಿ ಸಿಐಡಿ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು. ಇದರ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಇದೀಗ ಬಿ.ಎಸ್ ಯಡಿಯೂರಪ್ಪಗೆ ಬಂಧನ ಭೀತಿ ಎದುರಾಗಿದ್ದು, ಯಾವುದೇ ಕ್ಷಣದಲ್ಲಾದರೂ ಬಿ.ಎಸ್ ಯಡಿಯೂರಪ್ಪ ಬಂಧನವಾಗುವ ಸಾಧ್ಯತೆ ಇದೆ.
