ನಟ ದರ್ಶನ್‌ಗೆ ಎದುರಾಯ್ತು ಮತ್ತೊಂದು ಸಂಕಷ್ಟ, ಏನದು ?

22 Jun 2024 2:14 PM GMT

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜುಲೈ 4ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಳಪಟ್ಟಿರುವ ನಟ ದರ್ಶನ್ಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ರೇಣುಕಾಸ್ವಾಮಿ ಎನ್ನುವ ವ್ಯಕ್ತಿಯ ಕೊಲೆಯಲ್ಲಿ ಭಾಗಿಯಾದ ಆರೋಪದ ಮೇಲೆ ಕನ್ನಡದ ಖ್ಯಾತ ನಟ ದರ್ಶನ್ ಅವರನ್ನು ಜೂನ್ 11ರಂದು ಪೊಲೀಸರು ಬಂಧಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಮುಂದುವರಿದಿದೆ. ಇದೀಗ ರಾಜರಾಜೇಶ್ವರಿ ನಗರದ ಐಡಿಯಲ್ ಹೋಮ್ಸ್ ಪ್ರದೇಶದ ರಾಜಕಾಲುವೆ ವ್ಯಾಪ್ತಿಯಲ್ಲಿ ನಟ ದರ್ಶನ್ ಅವರ ಮನೆ ಕಟ್ಟಲಾಗಿದೆ ಎನ್ನುವ ವಿಷಯ ಮತ್ತೆ ಚರ್ಚೆಯ ಮುನ್ನೆಲೆಗೆ ಬಂದಿದೆ.