ಪ್ರಭಾವಕ್ಕೆ ಒಳಗಾಗದೆ ತನಿಖೆ ಮಾಡಬೇಕು ಎಂದ ಅಕ್ಕೈ ಪದ್ಮಶಾಲಿ

21 July 2025 5:01 PM IST

ಧರ್ಮಸ್ಥಳ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಎಸ್‌ಐಟಿಗೆ ವಹಿಸಿರುವ ಬೆನ್ನಲ್ಲೇ, ಖ್ಯಾತ ಸಾಮಾಜಿಕ ಕಾರ್ಯಕರ್ತೆ ಅಕ್ಕೈ ಪದ್ಮಶಾಲಿ ಅವರು ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿದ್ದಾರೆ. "ವಿಶೇಷ ತನಿಖಾ ತಂಡವು ಯಾವುದೇ ರಾಜಕೀಯ ಅಥವಾ ಧಾರ್ಮಿಕ ಪ್ರಭಾವಕ್ಕೆ ಒಳಗಾಗದೆ, ಪಾರದರ್ಶಕವಾಗಿ ಮತ್ತು ಪ್ರಾಮಾಣಿಕವಾಗಿ ತನಿಖೆ ನಡೆಸಿ ಸತ್ಯವನ್ನು ಬಯಲಿಗೆಳೆಯಬೇಕು. ಸಂತ್ರಸ್ತರಿಗೆ ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ" ಎಂದು ಅವರು ಒತ್ತಾಯಿಸಿದ್ದಾರೆ. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ, ತನಿಖಾ ತಂಡವು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂಬುದು ಅವರ ಕಳಕಳಿಯಾಗಿದೆ.