x

ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗಸರೋಜಿನಿ ಮಹಿಷಿ ವರದಿ ಜಾರಿಗೆ ಮತ್ತೊಂದು ಹೆಜ್ಜೆ

11 Oct 2025 6:50 PM IST

ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸುವ ವಿಚಾರ ಮತ್ತೊಮ್ಮೆ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಈ ಹಿಂದೆ ರಾಷ್ಟ್ರಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿ, ಕೈಗಾರಿಕಾ ವಲಯದ ತೀವ್ರ ವಿರೋಧದಿಂದಾಗಿ ತಾತ್ಕಾಲಿಕವಾಗಿ ಹಿಂಪಡೆಯಲಾಗಿದ್ದ ಈ ಸೂಕ್ಷ್ಮ ವಿಷಯ, ಇದೀಗ ಮತ್ತೆ ಚಿಗುರೊಡೆದಿದೆ. ಕನ್ನಡಪರ ಸಂಘಟನೆಗಳ ನಿರಂತರ ಒತ್ತಡ ಮತ್ತು ಸರೋಜಿನಿ ಮಹಿಷಿ ವರದಿ ಜಾರಿಯ ಕೂಗಿನ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಈ ನಿಟ್ಟಿನಲ್ಲಿ ಗಂಭೀರ ಹೆಜ್ಜೆ ಇಡಲು ಸಿದ್ಧತೆ ನಡೆಸುತ್ತಿದ್ದು, ಕಾರ್ಮಿಕ ಇಲಾಖೆ ಈಗಾಗಲೇ ಪ್ರಕ್ರಿಯೆ ಆರಂಭಿಸಿದೆ.