ಬೆಂಗಳೂರು ರಸ್ತೆಯಲ್ಲಿ ಮರಣ ಗುಂಡಿ: ಬ್ಯಾರಿಕೇಡ್ ಇಟ್ಟು ಕೈತೊಳೆದುಕೊಂಡ ಜಲಮಂಡಳಿ!
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ರಸ್ತೆ ಗುಂಡಿಗಳನ್ನು ಮುಚ್ಚಲು ರಾಜ್ಯ ಸರ್ಕಾರ ಕೋಟ್ಯಂತರ ರೂಪಾಯಿ ಬಿಡುಗಡೆ ಮಾಡಿದೆ. ಆದರೂ, ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಪ್ರಮುಖ ರಸ್ತೆಗಳಲ್ಲಿನ ಮ್ಯಾನ್‌ಹೋಲ್‌ಗಳು ವಾಹನ ಸವಾರರಿಗೆ ಮೃತ್ಯುಕೂಪಗಳಾಗಿ ಪರಿಣಮಿಸಿವೆ. ನಗರದ ಪ್ರತಿಷ್ಠಿತ ವಿಠಲ್ ಮಲ್ಯ ರಸ್ತೆಯಲ್ಲಿ ಬರೋಬ್ಬರಿ ಆರು ಅಡಿ ಆಳದ ಮ್ಯಾನ್‌ಹೋಲ್ ಒಂದು ಬಲಿಗಾಗಿ ಬಾಯ್ತೆರೆದು ನಿಂತಿದೆ. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಹಾಗೂ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA)ದ ಅಧಿಕಾರಿಗಳು, ಈ ಅಪಾಯಕಾರಿ ಗುಂಡಿಯನ್ನು ಶಾಶ್ವತವಾಗಿ ಮುಚ್ಚುವ ಬದಲು, ಕೇವಲ ಬ್ಯಾರಿಕೇಡ್‌ಗಳನ್ನು ಅಡ್ಡಲಾಗಿ ಇಟ್ಟು ತಮ್ಮ ಜವಾಬ್ದಾರಿಯಿಂದ ನುಣುಚಿಕೊಂಡಿದ್ದಾರೆ.