BIFFES 2026 | ಸಿಲಿಕಾನ್ ಸಿಟಿಯಲ್ಲಿ ಸಿನಿ ಹಬ್ಬ: ಜನವರಿ 29ರಿಂದ ‘ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ’ದ ಸಡಗರ

24 Dec 2025 9:55 AM IST

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಮ್ಮೆ ಸಿನಿ ಹಬ್ಬದ ಸಂಭ್ರಮ ಶುರುವಾಗಲಿದೆ. 17ನೇ ಆವೃತ್ತಿಯ 'ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ'ವು ಜನವರಿ 29 ರಿಂದ ಫೆಬ್ರವರಿ 6 ರವರೆಗೆ ಅದ್ಧೂರಿಯಾಗಿ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದಾರೆ. ಈ ಬಾರಿಯ ಚಿತ್ರೋತ್ಸವವು ಹಲವಾರು ವಿಶೇಷತೆಗಳಿಂದ ಕೂಡಿದ್ದು, ವಿಶ್ವದಾದ್ಯಂತ ಸಿನಿ ಪ್ರಿಯರ ಗಮನ ಸೆಳೆಯುತ್ತಿದೆ.