ಸನಿಕೆ, ಬಾಣಲೆಯಿಂದ ಗುಂಡಿ ಮುಚ್ಚಿ ಪ್ರತಿಭಟನೆ ನಡೆಸಿದ ಬಿಜೆಪಿ ನಾಯಕರು
ಇತ್ತೀಚೆಗೆ ಬೆಂಗಳೂರಿನ ರಸ್ತೆ ಗುಂಡಿ ಬ್ಲಾಕ್‌ಬಕ್ ಸಿಇಒ ಟ್ವೀಟ್ ಮಾಡಿ, ಬೆಂಗಳೂರಿನಲ್ಲಿ ಮೂಲಸೌಕರ್ಯ ಹದಗೆಡುತ್ತಿದೆ. ಬೆಂಗಳೂರಿನ ಹೊರವರ್ತುಲ ರಸ್ತೆಯ ಬೆಳ್ಳಂದೂರಿನಲ್ಲಿ ನಮ್ಮ ಕಚೇರಿಯಿದೆ. ಗುಂಡಿ ಬಿದ್ದ ರಸ್ತೆಗಳು, ವಿಪರೀತ ದೂಳಿನಿಂದಾಗಿ ಕಚೇರಿಗೆ ಬರಲು ಸಹೋದ್ಯೋಗಿಗಳು ನಿತ್ಯ ಒಂದೂವರೆ ಗಂಟೆಗೂ ಹೆಚ್ಚು ಸಮಯ ತೆಗೆದುಕೊಳ್ಳುತ್ತಿದ್ದಾರೆ. ಹೀಗಾಗಿ ಕಂಪನಿಯನ್ನು ಇಲ್ಲಿಂದ ಸ್ಥಳಾಂತರಿಸಲು ನಿರ್ಧರಿಸಿದ್ದೇವೆ ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದರು. ಇದಕ್ಕೆ ಐಟಿ ದಿಗ್ಗಜರು ಕಳವಳ ವ್ಯಕ್ತಪಡಿಸಿ, ಬೆಂಗಳೂರಿನ ರಸ್ತೆ ಗುಂಡಿಗಳ ಸಮಸ್ಯೆ ಸರಿಪಡಿಸುವಂತೆ ರಾಜ್ಯ ಸರ್ಕಾರದ ಮೇಲೆ ಒತ್ತಡ ಹಾಕಿದ್ದರು.
