ಸಿಎಂ ಗದ್ದುಗೆಗೆ ಜಿದ್ದು: ಸಹಿ ಸಂಗ್ರಹಕ್ಕೆ ಮುಂದಾದ ಡಿಸಿಎಂ, ಕ್ಯಾರೇ ಎನ್ನದ ಸಿಎಂ
ರಾಜ್ಯ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ (CM) ಕುರ್ಚಿಗಾಗಿ ನಡೆಯುತ್ತಿರುವ ಹಗ್ಗಜಗ್ಗಾಟ ಈಗ ಅಂತಿಮ ಹಂತಕ್ಕೆ (Climax) ಬಂದು ನಿಂತಿದೆ. ಸಿಎಂ ಪಟ್ಟಕ್ಕಾಗಿ ಪಟ್ಟು ಹಿಡಿದಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಹಿ ಸಂಗ್ರಹಕ್ಕೆ ಮುಂದಾಗಿದ್ದಾರೆ ಎಂಬ ಸ್ಫೋಟಕ ಮಾಹಿತಿ ಲಭ್ಯವಾಗಿದೆ. ಇನ್ನೊಂದೆಡೆ, ಸಿಎಂ ಸಿದ್ದರಾಮಯ್ಯ ಅವರು ಯಾವುದೇ ಕಾರಣಕ್ಕೂ ಕುರ್ಚಿ ಬಿಟ್ಟುಕೊಡಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಮಹತ್ವದ ಸಭೆ ನಡೆದಿದೆ. ಸಚಿವರು, ಶಾಸಕರು ಮತ್ತು ಹೈಕಮಾಂಡ್ ನಾಯಕರ ನಡುವೆ ನಡೆದ ಈ ಸಭೆಯಲ್ಲಿ ಏನಾಯ್ತು?


