ಪಾದರಕ್ಷೆ ಧರಿಸಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ: ಬಾನು ಮುಷ್ತಾಕ್ ಬೆಂಬಲಕ್ಕೆ ನಿಂತ ಆಯೋಜಕರು

16 March 2026 8:47 PM IST

ಮಂಡ್ಯದಲ್ಲಿ ದಲಿತ ಸಂಘರ್ಷ ಸಮಿತಿ ಹಾಗೂ ಶ್ರೀನಿವಾಸ್ ಫೌಂಡೇಶನ್ ವತಿಯಿಂದ ಆಯೋಜಿಸಲಾಗಿದ್ದ 'ಸಂವಿಧಾನ ಉಳಿವಿಗಾಗಿ ಜನಜಾಗೃತಿ' ಕಾರ್ಯಕ್ರಮವೊಂದರಲ್ಲಿ ನಡೆದ ಘಟನೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಈ ಕಾರ್ಯಕ್ರಮದಲ್ಲಿ ಖ್ಯಾತ ಲೇಖಕಿ ಹಾಗೂ ಬೂಕರ್ ಪ್ರಶಸ್ತಿ ಪುರಸ್ಕೃತರಾದ ಬಾನು ಮುಷ್ತಾಕ್ ಅವರು ಪಾದರಕ್ಷೆ ಧರಿಸಿಯೇ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ವಿವಾದದ ಬೆನ್ನಲ್ಲೇ, ಕಾರ್ಯಕ್ರಮದ ಸಂಘಟಕರಲ್ಲೊಬ್ಬರಾದ ಎಂ.ವಿ. ಕೃಷ್ಣ ಅವರು 'ದ ಫೆಡರಲ್ ಕರ್ನಾಟಕ'ಕ್ಕೆ ನೀಡಿದ ವಿಶೇಷ ಸಂದರ್ಶನದಲ್ಲಿ ಅಂದು ನಡೆದ ಘಟನೆಯ ಬಗ್ಗೆ ಸವಿಸ್ತಾರವಾಗಿ ವಿವರಿಸಿದ್ದಾರೆ. ಅಂಬೇಡ್ಕರ್ ಅವರಿಗೆ ಅವಮಾನ ಮಾಡುವ ಉದ್ದೇಶ ಅಲ್ಲಿ ಇತ್ತೇ? ಅಥವಾ ತಾಂತ್ರಿಕವಾಗಿ ಅಲ್ಲಿ ಏನಾಗಿತ್ತು? ಎಂಬುದರ ಕುರಿತು ಸಂಘಟಕರು ನೀಡಿರುವ ಸ್ಪಷ್ಟನೆ ಈ ವೀಡಿಯೊದಲ್ಲಿದೆ.