ಶಾಮನೂರು ಕುಟುಂಬಕ್ಕೆ ಟಿಕೆಟ್ ನೀಡಲು ಮುಸ್ಲಿಂ ಮುಖಂಡರ ಆಕ್ಷೇಪ

18 March 2026 7:37 PM IST

ದಾವಣಗೆರೆ ದಕ್ಷಿಣ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ಅಭ್ಯರ್ಥಿ ಆಯ್ಕೆ ಕಾಂಗ್ರೆಸ್‌ಗೆ ತಲೆನೋವಾಗಿ ಪರಿಣಮಿಸಿದೆ. ಶಾಮನೂರು ಶಿವಶಂಕರಪ್ಪ ನಿಧನದಿಂದ ತೆರವಾಗಿರುವ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯುತ್ತಿದ್ದು ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿದೆ. ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡಲು ಆಗ್ರಹ ವ್ಯಕ್ತವಾಗಿದ್ದರೆ, ಶಾಮನೂರು ಕುಟುಂಬದವರು ಟಿಕೆಟ್ ತಮಗೇ ಬೇಕೆಂದು ಪಟ್ಟು ಹಿಡಿದಿದ್ದಾರೆ. ಟಿಕೆಟ್ ಆಕಾಂಕ್ಷಿಯಾದ ವಿಧಾನಪರಿಷತ್ ಸದಸ್ಯ ಕೆ. ಅಬ್ದುಲ್ ಜಬ್ಬಾರ್ ಅವರು ʼದ ಫೆಡರಲ್ ಕರ್ನಾಟಕʼದ ಜತೆ ಮಾತನಾಡಿದ್ದಾರೆ.