Dharmasthala Case: ಎಸ್‌ಐಟಿ ತನಿಖೆ ಬಗ್ಗೆ ಅನುಮಾನವಿದೆ; ನ್ಯಾಯವಾದಿ ಎಸ್. ಬಾಲನ್
ಧರ್ಮಸ್ಥಳದ ಆಜುಬಾಜಿನಲ್ಲಿ ನೂರಾರು ಅನಾಮಧೇಯ ಹೆಣ್ಣು ಮಕ್ಕಳ ಮೃತದೇಹಗಳನ್ನು ಕಾನೂನುಬಾಹಿರವಾಗಿ ದಫನ್ ಮಾಡಲಾಗಿದೆ’ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (ಎಸ್‌ಐಟಿ) ನಡೆಸುತ್ತಿದ್ದ ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ಮತ್ತು ಇದಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಜೆಎಂಎಫ್‌ಸಿ ಕೋರ್ಟ್‌ನಲ್ಲಿನ ನ್ಯಾಯಿಕ ವಿಚಾರಣೆಯನ್ನು ಸಮಾಪ್ತಿಗೊಳಿಸಲು ಆದೇಶಿಸಬೇಕು’ ಎಂದು ಕೋರಿ ಗಿರೀಶ್ ಮಟ್ಟೆಣ್ಣವರ್, ಮಹೇಶ್ ಶೆಟ್ಟಿ ತಿಮರೋಡಿ, ಟಿ.ಜಯಂತ್ ಮತ್ತು ವಿಠ್ಠಲ ಗೌಡ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿ ಆದೇಶ ನೀಡಿದರು. ಅರ್ಜಿದಾರರ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲರಾದ ಎಸ್. ಬಾಲನ್ ಅವರ ಜತೆ ದ ಫೆಡರಲ್ ಕರ್ನಾಟಕ ನಡೆಸಿದ ಸಂದರ್ಶನದಲ್ಲಿ ಏಕೆ ಅರ್ಜಿಸಲ್ಲಿಸಲಾಯಿತು ಎಂದು ಸವಿವರವಾಗಿ ಹೇಳಿದ್ದಾರೆ.




