ಧರ್ಮಸ್ಥಳ ಪ್ರಕರಣ: ಸತ್ಯ ಬಹಿರಂಗವಾಗದಿದ್ದರೆ ಜನಾಂದೋಲನ; ಸೂಲಿಬೆಲೆ ಎಚ್ಚರಿಕೆ
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ಹೊಸ ಚರ್ಚೆ ಆರಂಭವಾಗಿದೆ. ಹೈಕೋರ್ಟ್‌ಗೆ ಸಲ್ಲಿಕೆಯಾಗಿರುವ ಅರ್ಜಿ ಮತ್ತು ಅದರಲ್ಲಿರುವ ಆರೋಪಗಳ ಬಗ್ಗೆ ಹಲವು ಪ್ರಶ್ನೆಗಳು ಎದ್ದಿವೆ. ಈ ಬೆಳವಣಿಗೆಗಳ ಹಿನ್ನಲೆಯಲ್ಲಿ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ನಡೆದಿದೆಯೇ ಎಂಬ ಅನುಮಾನಗಳೂ ವ್ಯಕ್ತವಾಗುತ್ತಿವೆ. ಈ ಕುರಿತು ದ ಫೆಡರಲ್ ಕರ್ನಾಟಕದೊಂದಿಗೆ ಮಾತನಾಡಿರುವ ವಾಗ್ಮಿ ಹಾಗೂ ಸಾಮಾಜಿಕ ಹೋರಾಟಗಾರ ಚಕ್ರವರ್ತಿ ಸೂಲಿಬೆಲೆ, ಪ್ರಕರಣದ ಎಲ್ಲ ಆಯಾಮಗಳ ಬಗ್ಗೆ ಸಮಗ್ರ ತನಿಖೆ ನಡೆಯಬೇಕು ಎಂದು ಒತ್ತಾಯಿಸಿದ್ದಾರೆ. ಷಡ್ಯಂತ್ರದ ಆರೋಪಗಳಿದ್ದರೆ ಅದರ ಹಿಂದಿರುವ ವ್ಯಕ್ತಿಗಳು ಮತ್ತು ಶಕ್ತಿಗಳು ಯಾರು ಎಂಬುದು ಬಹಿರಂಗವಾಗಬೇಕು ಎಂದು ಅವರು ಹೇಳಿದ್ದಾರೆ. ಲ್ಲದೆ, ಪ್ರಕರಣಕ್ಕೆ ಸಂಬಂಧಿಸಿದ SIT ವರದಿಯನ್ನು ಸಾರ್ವಜನಿಕಗೊಳಿಸಬೇಕು. ಸತ್ಯಾಂಶಗಳು ಜನರ ಮುಂದೆ ಬರಬೇಕು. ಒಂದು ವೇಳೆ ಈ ವಿಚಾರದಲ್ಲಿ ಸಂಪೂರ್ಣ ತನಿಖೆ ನಡೆಸದೇ, ಆರೋಪಗಳ ಸತ್ಯಾಸತ್ಯತೆ ಬಹಿರಂಗಪಡಿಸದಿದ್ದರೆ ರಾಜ್ಯಾದ್ಯಂತ ಜನಾಂದೋಲನ ರೂಪುಗೊಳ್ಳುವ ಸಾಧ್ಯತೆ ಇದೆ ಎಂದು ಸೂಲಿಬೆಲೆ ಎಚ್ಚರಿಕೆ ನೀಡಿದ್ದಾರೆ.

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ಹೊಸ ಚರ್ಚೆ ಆರಂಭವಾಗಿದೆ. ಹೈಕೋರ್ಟ್‌ಗೆ ಸಲ್ಲಿಕೆಯಾಗಿರುವ ಅರ್ಜಿ ಮತ್ತು ಅದರಲ್ಲಿರುವ ಆರೋಪಗಳ ಬಗ್ಗೆ ಹಲವು ಪ್ರಶ್ನೆಗಳು ಎದ್ದಿವೆ. ಈ ಬೆಳವಣಿಗೆಗಳ ಹಿನ್ನಲೆಯಲ್ಲಿ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ನಡೆದಿದೆಯೇ ಎಂಬ ಅನುಮಾನಗಳೂ ವ್ಯಕ್ತವಾಗುತ್ತಿವೆ.
ಈ ಕುರಿತು ದ ಫೆಡರಲ್ ಕರ್ನಾಟಕದೊಂದಿಗೆ ಮಾತನಾಡಿರುವ ವಾಗ್ಮಿ ಹಾಗೂ ಸಾಮಾಜಿಕ ಹೋರಾಟಗಾರ ಚಕ್ರವರ್ತಿ ಸೂಲಿಬೆಲೆ, ಪ್ರಕರಣದ ಎಲ್ಲ ಆಯಾಮಗಳ ಬಗ್ಗೆ ಸಮಗ್ರ ತನಿಖೆ ನಡೆಯಬೇಕು ಎಂದು ಒತ್ತಾಯಿಸಿದ್ದಾರೆ. ಷಡ್ಯಂತ್ರದ ಆರೋಪಗಳಿದ್ದರೆ ಅದರ ಹಿಂದಿರುವ ವ್ಯಕ್ತಿಗಳು ಮತ್ತು ಶಕ್ತಿಗಳು ಯಾರು ಎಂಬುದು ಬಹಿರಂಗವಾಗಬೇಕು ಎಂದು ಅವರು ಹೇಳಿದ್ದಾರೆ. ಲ್ಲದೆ, ಪ್ರಕರಣಕ್ಕೆ ಸಂಬಂಧಿಸಿದ SIT ವರದಿಯನ್ನು ಸಾರ್ವಜನಿಕಗೊಳಿಸಬೇಕು. ಸತ್ಯಾಂಶಗಳು ಜನರ ಮುಂದೆ ಬರಬೇಕು. ಒಂದು ವೇಳೆ ಈ ವಿಚಾರದಲ್ಲಿ ಸಂಪೂರ್ಣ ತನಿಖೆ ನಡೆಸದೇ, ಆರೋಪಗಳ ಸತ್ಯಾಸತ್ಯತೆ ಬಹಿರಂಗಪಡಿಸದಿದ್ದರೆ ರಾಜ್ಯಾದ್ಯಂತ ಜನಾಂದೋಲನ ರೂಪುಗೊಳ್ಳುವ ಸಾಧ್ಯತೆ ಇದೆ ಎಂದು ಸೂಲಿಬೆಲೆ ಎಚ್ಚರಿಕೆ ನೀಡಿದ್ದಾರೆ.

