ಏನಾದರೂ ಮಾಡಿ ಅಲೆಮಾರಿಗಳಿಗೆ ಶೇ. 1 ರಷ್ಟು ಮೀಸಲಾತಿ ನೀಡಬೇಕೆಂದು ಮಾಜಿ ಸಚಿವ ಎಚ್.ಆಂಜನೇಯ ಆಗ್ರಹ
ಒಳ ಮೀಸಲಾತಿ ಬಗ್ಗೆ ನ್ಯಾ. ಎಚ್.ಎನ್. ನಾಗಮೋಹನದಾಸ್ ಆಯೋಗ ನೀಡಿರುವ ವರದಿ ಸರ್ಕಾರ ಅಂಗೀಕರಿಸಿದೆ. ಆದರೆ ಒಳ ಮೀಸಲಾತಿಯಲ್ಲಿ ಅಲೆಮಾರಿಗಳಿಗೆ ಅನ್ಯಾಯ ಆಗಿದೆ ಎಂಬ ಕೂಗು ಎದ್ದಿದೆ. ಮಾಜಿ ಸಚಿವ ಹಾಗು ಕಾಂಗ್ರೆಸ್ ಮುಖಂಡ ಎಚ್. ಆಂಜನೇಯ ಅವರು ಅಲೆಮಾರಿಗಳಿಗೆ ಒಳಮೀಸಲಾತಿ ಕಲ್ಪಿಸುವ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.
