ಟನಲ್ ರಸ್ತೆಯ ವೈಜ್ಞಾನಿಕತೆ, ಸಾಧಕ-ಬಾಧಕಗಳ ಬಗ್ಗೆ ಭೂ ವಿಜ್ಞಾನಿ ಎಚ್.ಎಸ್. ಎಂ ಪ್ರಕಾಶ್ ವಿವರಣೆ

31 Oct 2025 11:19 AM IST

ಲಾಲ್‌ಬಾಗ್‌ ಪರಿಸರದಲ್ಲಿ ಸುರಂಗ ಮಾರ್ಗ ಯೋಜನೆಯು ಪರ-ವಿರೋಧದ ಚರ್ಚೆಗೆ ಕಾರಣವಾಗಿದೆ. ಸುರಂಗ ರಸ್ತೆ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಪಣ ತೊಟ್ಟು, ಜಾಗತಿಕ ಟೆಂಡರ್‌ ಕರೆದಿದೆ. ಆದರೆ, ಸುರಂಗ ರಸ್ತೆ ಯೋಜನೆಗೆ ಪರಿಸರವಾದಿಗಳು ಹಾಗೂ ಬಿಜೆಪಿ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಯೋಜನೆಯ ಬಾಧಕಗಳ ಕುರಿತು ಜನಜಾಗೃತಿ ಮೂಡಿಸಲು ಮುಂದಾಗಿದ್ದಾರೆ. ಸುರಂಗ ರಸ್ತೆ ಯೋಜನೆ ಕುರಿತು ಭೂಗರ್ಭ ಶಾಸ್ತ್ರಜ್ಞರು ಯೋಜನೆ ಕುರಿತು ತಮ್ಮದೇ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಈ ಮಧ್ಯೆ, ಭಾರತೀಯ ಭೂ ಸರ್ವೇಕ್ಷಣಾ ಇಲಾಖೆ ತಜ್ಞರ ತಂಡ ಲಾಲ್‌ಬಾಗ್‌ಗೆ ಭೇಟಿ ನೀಡಿ, ಸಾಧಕ-ಬಾಧಕ ಪರಿಶೀಲಿಸಲು ಉದ್ದೇಶಿಸಿದೆ. ಭಾರತೀಯ ಭೂವೈಜ್ಞಾನಿಕ ಸರ್ವೇಕ್ಷಣಾ ಇಲಾಖೆ ನಿವೃತ್ತ ಪ್ರಧಾನ ಉಪ ನಿರ್ದೇಶಕ ಹಾಗೂ ಭೂಗರ್ಭ ಶಾಸ್ತ್ರಜ್ಞ ಎಚ್‌.ಎಸ್‌.ಎಂ. ಪ್ರಕಾಶ್‌ ಅವರು ʼದ ಫೆಡರಲ್‌ ಕರ್ನಾಟಕʼಕ್ಕೆ ನೀಡಿದ ವಿಶೇಷ ಸಂದರ್ಶನದಲ್ಲಿ ಹಲವು ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ. ಅವರ ಸಂದರ್ಶನದ ಪೂರ್ಣ ಪಾಠ ಇಲ್ಲಿದೆ.