LIVE | ಸ್ಥಳೀಯ ಸಂಸ್ಥೆಗಳು ಚುನಾವಣೆಯಲ್ಲಿ ಬಿಜೆಪಿ ಜತೆ ದೋಸ್ತಿ ಇಲ್ಲ; ‘ದಳ’ಪತಿಗಳ ಹೊಸ ಪ್ಲಾನ್ ಏನು!

26 Dec 2025 7:19 PM IST

ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ರಾಜ್ಯ ರಾಜಕೀಯದಲ್ಲಿ ಮಹತ್ವದ ಹೇಳಿಕೆ ನೀಡಿದ್ದಾರೆ. ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ (Local Body Elections) ಬಿಜೆಪಿಯೊಂದಿಗೆ ಯಾವುದೇ ಮೈತ್ರಿ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗೆ ಮಾತ್ರ ಮೈತ್ರಿ ಸೀಮಿತವಾಗಿದ್ದು, ಸ್ಥಳೀಯ ಮಟ್ಟದಲ್ಲಿ ಜೆಡಿಎಸ್ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಘೋಷಿಸಿದ್ದಾರೆ. ಗೌಡರ ಈ ನಿರ್ಧಾರದ ಹಿಂದಿರುವ ರಾಜಕೀಯ ಲೆಕ್ಕಾಚಾರವೇನು? ಇಲ್ಲಿದೆ ಸಂಪೂರ್ಣ ಮಾಹಿತಿ.

ಕರ್ನಾಟಕದ ಮಾಜಿ ಸಿಎಂ ದೇವರಾಜು ಅರಸು ಅವರು 7 ವರ್ಷ 7 ತಿಂಗಳುಗಳ ಕಾಲ ಸೇವೆ ಸಲ್ಲಿಸಿ ದೀರ್ಘಾವಧಿಯ ಮುಖ್ಯಮಂತ್ರಿಗಳ ದಾಖಲೆ ಬರೆಸಿದ್ದರು. ಈಗ ಸಿಎಂ ಸಿದ್ದರಾಮಯ್ಯ ಅವರು ಆ ದಾಖಲೆಯನ್ನು ಮುರಿಯಲಿದ್ದು, ಈ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ಹಾಗೂ ಯುವ ಅಹಿಂದಾ ಒಕ್ಕೂಟದ ಕಾರ್ಯಕರ್ತರು ನಾಟಿಕೋಳಿ ಭೋಜನ ಆಯೋಜಿಸಿದ್ದಾರೆ. ಜನವರಿ 5ರಂದು ಈ ಕಾರ್ಯಕ್ರಮ ನಡೆಯಲಿದ್ದು, ಅದಕ್ಕಾಗಿ ವಿಶೇಷ ಪೋಸ್ಟರ್ ಬಿಡುಗಡೆಯಾಗಿದೆ. ಈ ಕಾರ್ಯಕ್ರಮದ ಹಿಂದೆ ಅಹಿಂದಾ ಸಮುದಾಯದ ರಾಜಕೀಯ ಸಂದೇಶವೂ ಅಡಗಿದೆ ಎಂದು ರಾಜಕೀಯ ವಲಯದಲ್ಲಿ ಚರ್ಚೆ ತೀವ್ರವಾಗಿದೆ.