LIVE | ಅರಕಲಗೂಡಿನಲ್ಲಿ ಕೈ ಸರ್ಕಾರದ ವಿರುದ್ಧ ಹೆಚ್‌ಡಿಕೆ ವಾಗ್ದಾಳಿ: ಜನರ ಕಷ್ಟಕ್ಕಿಂತ ಅಧಿಕಾರವೇ ಮು

26 Feb 2026 3:47 PM IST

ಹಾಸನ (ಅರಕಲಗೂಡು): ರಾಜ್ಯದಲ್ಲಿನ ಸದ್ಯದ ರಾಜಕೀಯ ಬೆಳವಣಿಗೆಗಳ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅರಕಲಗೂಡಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, "ಕಾಂಗ್ರೆಸ್ ಸರ್ಕಾರಕ್ಕೆ ರಾಜ್ಯದ ಜನರ ಸಮಸ್ಯೆಗಳಿಗಿಂತ ಮುಖ್ಯಮಂತ್ರಿ ಕುರ್ಚಿಯ ಸಮಸ್ಯೆಯೇ ದೊಡ್ಡದಾಗಿದೆ. ಜನರ ಕಷ್ಟಗಳನ್ನು ಆಲಿಸಲು ಸಮಯವಿಲ್ಲದ ಸರ್ಕಾರ, ಅಧಿಕಾರ ಹಂಚಿಕೆ ಮತ್ತು ಕುರ್ಚಿ ಉಳಿಸಿಕೊಳ್ಳುವ ಗೊಂದಲಗಳಿಗೆ ಹೆಚ್ಚಿನ ಸಮಯ ವ್ಯಯಿಸುತ್ತಿದೆ," ಎಂದು ಆಕ್ರೋಶ ವ್ಯಕ್ತಪಡಿಸಿದರು.