LIVE | ರಾಜಭವನದಲ್ಲಿ ನಡೆದ ಹೈವೋಲ್ಟೇಜ್ ಮೀಟಿಂಗ್ : ಅಂತಿಮವಾಗಿ ಆಧಿವೇಶನದಲ್ಲಿ ಭಾಷಣ ಮಾಡಲು ಒಪ್ಪಿದ ಗವರ್ನರ್

21 Jan 2026 8:08 PM IST

ಕರ್ನಾಟಕದ ರಾಜಕೀಯದಲ್ಲಿ ಕಳೆದ ಕೆಲವು ಗಂಟೆಗಳಿಂದ ಉದ್ಭವಿಸಿದ್ದ ಸಾಂವಿಧಾನಿಕ ಬಿಕ್ಕಟ್ಟು ಈಗ ಸುಖಾಂತ್ಯ ಕಂಡಿದೆ. ನಾಳಿನ (ಜನವರಿ 22) ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನಿರಾಕರಿಸಿದ್ದರು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಸೂಚನೆಯಂತೆ ಕಾನೂನು ಸಚಿವ ಎಚ್.ಕೆ. ಪಾಟೀಲ್ ಅವರ ನೇತೃತ್ವದ ಉನ್ನತ ಮಟ್ಟದ ನಿಯೋಗವು ರಾಜಭವನಕ್ಕೆ ತೆರಳಿ ರಾಜ್ಯಪಾಲರೊಂದಿಗೆ ಸುದೀರ್ಘ ಚರ್ಚೆ ನಡೆಸಿತು.