ಹೈಕಮಾಂಡ್ ನೋಟಿಸ್ ನನಗೆ ಕೊಟ್ಟಿಲ್ಲ, ಮಿಥುನ್ ರೈಗೆ ಬಂದಿದೆ | Ivan D'Souza Exclusive

9 Dec 2025 5:13 PM IST

ಮಂಗಳೂರಿನಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಮತ್ತು ಸಿಎಂ ಸಿದ್ದರಾಮಯ್ಯ ಅವರ ಭೇಟಿ ವೇಳೆ ನಡೆದ ಘೋಷಣೆ ಕೂಗಿದ ಘಟನೆ ರಾಜ್ಯ ಕಾಂಗ್ರೆಸ್‌ನಲ್ಲಿ ಸಂಚಲನ ಮೂಡಿಸಿತ್ತು. ಈ ವೇಳೆ ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ಬೆಂಬಲಿಗರ ನಡುವೆ ಶಕ್ತಿ ಪ್ರದರ್ಶನ ನಡೆದಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಹೈಕಮಾಂಡ್ ನೋಟಿಸ್ ನೀಡಿದೆ ಎಂಬ ವದಂತಿಗಳ ಕುರಿತು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ದ ಫೆಡರಲ್ ಕರ್ನಾಟಕದ ವಿಶೇಷ ಸಂದರ್ಶನದಲ್ಲಿ ಸ್ಪಷ್ಟನೆ ನೀಡಿದ್ದಾರೆ.