ಸಿಎಂ ಸಭೆ ಕರೆದರೆ ಕಮಿಷನ್ ಪಟ್ಟಿ ನೀಡುತ್ತೇವೆ, ಇಲ್ಲದಿದ್ದರೆ ಸಾರ್ವಜನಿಕವಾಗಿ ಬಿಡುಗಡೆ ಮಾಡುವ ಎಚ್ಚರಿಕೆ
ರಾಜ್ಯ ಸರ್ಕಾರಿ ಇಲಾಖೆಗಳ ಟೆಂಡರ್‌ಗಳಲ್ಲಿ ಶೇ. 12ರಷ್ಟು ಕಮಿಷನ್ ಬೇಡಿಕೆ ಇಡಲಾಗುತ್ತಿದೆ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಗೌರವ ಅಧ್ಯಕ್ಷ ಜಗನ್ನಾಥ್ ಬಿ. ಶೇಗಜಿ ಗಂಭೀರ ಆರೋಪ ಮಾಡಿದ್ದಾರೆ. ಒಂದು ವಾರದೊಳಗೆ ಮುಖ್ಯಮಂತ್ರಿಗಳು ಸಭೆ ಕರೆದು ಸಮಸ್ಯೆ ಬಗೆಹರಿಸದಿದ್ದರೆ, ಕಮಿಷನ್ ಪಡೆಯುವ ಅಧಿಕಾರಿಗಳ ಹೆಸರನ್ನು ಮಾಧ್ಯಮಗಳ ಮುಂದೆ ಬಹಿರಂಗಪಡಿಸುವುದಾಗಿ ಅವರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
