ಸಿದ್ದರಾಮಯ್ಯ ಪರಮಾಪ್ತನ ಹೇಳಿಕೆ: ಸಿಎಂ ಸ್ಥಾನದಿಂದ ಇಳಿಸಿದರೆ ಕಾಂಗ್ರೆಸ್‌ಗೆ ನಷ್ಟ!
ಸಿದ್ದರಾಮಯ್ಯ ಅವರನ್ನು ಕಡೆಗಣಿಸಿದರೆ ಕಾಂಗ್ರೆಸ್ ಪಕ್ಷಕ್ಕೆ ಭಾರಿ ಡ್ಯಾಮೇಜ್ ಆಗಲಿದೆ ಎಂದು ಶಾಸಕ ಅಶೋಕ್ ಪಟ್ಟಣ್ ಹೊಸ ಬಾಂಬ್ ಸಿಡಿಸಿದ್ದಾರೆ. ರಾಜ್ಯ ಕಾಂಗ್ರೆಸ್‌ನಲ್ಲಿ ಮತ್ತೆ ನಾಯಕತ್ವದ ಚರ್ಚೆ ಮುನ್ನೆಲೆಗೆ ಬಂದಿದ್ದು, ಮುಖ್ಯಮಂತ್ರಿ ಸ್ಥಾನದ ಕುರಿತು ಹೊಸ ಸಮೀಕರಣಗಳು ಸದ್ದು ಮಾಡುತ್ತಿವೆ. ಪಕ್ಷ ಮತ್ತೆ ಅಧಿಕಾರಕ್ಕೆ ಬರಬೇಕಾದರೆ ಸಿದ್ದರಾಮಯ್ಯ ಅವರ ನಾಯಕತ್ವ ಅತ್ಯಗತ್ಯ. ಅವರನ್ನೇ ಮುಖ್ಯಮಂತ್ರಿಯಾಗಿ ಮುಂದುವರಿಸಬೇಕು ಎಂದು ಅಶೋಕ್ ಪಟ್ಟಣ್ ಬಲವಾಗಿ ಪ್ರತಿಪಾದಿಸಿದ್ದಾರೆ.


