LIVE | ರೆಸಾರ್ಟ್‌ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ: ಪರಿಷತ್ ಚುನಾವಣೆಗಾಗಿ ಯಾವ ರಣತಂತ್ರ?

16 Jun 2026 8:29 PM IST

ರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆ ಬೆಂಗಳೂರಿನ ಹೊರವಲಯದ ರೆಸಾರ್ಟ್‌ನಲ್ಲಿ ನಡೆಯುತ್ತಿದೆ. ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಈ ಸಭೆ ವಿಶೇಷ ಮಹತ್ವ ಪಡೆದುಕೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ನೇತೃತ್ವದಲ್ಲಿ ನಡೆಯುತ್ತಿರುವ ಈ ಸಭೆಯಲ್ಲಿ ಚುನಾವಣಾ ತಂತ್ರಗಾರಿಕೆ, ಪಕ್ಷದ ಸಂಘಟನೆ, ಶಾಸಕರ ಸಮನ್ವಯ ಸೇರಿದಂತೆ ಹಲವು ಪ್ರಮುಖ ವಿಷಯಗಳ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ. ಪರಿಷತ್ ಚುನಾವಣೆಗೂ ಮುನ್ನ ಕಾಂಗ್ರೆಸ್ ನಾಯಕತ್ವ ಯಾವ ಸಂದೇಶ ನೀಡಲು ಮುಂದಾಗಿದೆ? ಶಾಸಕರಿಗೆ ಯಾವ ಸೂಚನೆಗಳು ನೀಡಲಾಗುತ್ತಿವೆ? ರೆಸಾರ್ಟ್‌ನಲ್ಲಿ ನಡೆಯುತ್ತಿರುವ ಈ ಸಭೆಯ ರಾಜಕೀಯ ಮಹತ್ವವೇನು? ಈ ಎಲ್ಲ ವಿಚಾರಗಳ ಬಗ್ಗೆ ವಿವರವಾದ ಮಾಹಿತಿ ಮತ್ತು ವಿಶ್ಲೇಷಣೆಯನ್ನು ಈ ವಿಡಿಯೊದಲ್ಲಿ ನೀಡಲಾಗಿದೆ. ವಿಡಿಯೊ ನೋಡಿ ನಿಮ್ಮ ಅಭಿಪ್ರಾಯವನ್ನು ಕಾಮೆಂಟ್ ಮೂಲಕ ಹಂಚಿಕೊಳ್ಳಿ.