ಸರ್ಕಾರಿ ಶಾಲೆಗಳ ವಿಲೀನಕ್ಕೆ ಭುಗಿಲೆದ್ದ ಆಕ್ರೋಶ, ಸರ್ಕಾರಿ ಶಾಲೆ ಉಳಿವಿಗಾಗಿ ನಾಳೆ ಜನ ಸಮಾವೇಶ
ರಾಜ್ಯದಲ್ಲಿ ಕಡಿಮೆ ದಾಖಲಾತಿ ಹೊಂದಿರುವ ಸರ್ಕಾರಿ ಶಾಲೆಗಳನ್ನು ಕೆಪಿಎಸ್ ಮ್ಯಾಗ್ನೆಟ್ ಶಾಲೆʼಗಳೊಂದಿಗೆ ವಿಲೀನಗೊಳಿಸುವ ರಾಜ್ಯ ಸರ್ಕಾರದ ಉದ್ದೇಶಿತ ಯೋಜನೆಗೆ ಶೈಕ್ಷಣಿಕ ವಲಯದಲ್ಲಿ ತೀವ್ರ ಪ್ರತಿರೋಧ ವ್ಯಕ್ತವಾಗಿದೆ. ಖಾಸಗಿ ಶಾಲೆಗಳಂತೆ ಎಲ್‌ಕೆಜಿಯಿಂದ ಪಿಯುವರೆಗೆ ಒಂದೇ ಸೂರಿನಡಿ ಗುಣಮಟ್ಟದ ಶಿಕ್ಷಣ ಒದಗಿಸುವ ಕೆಪಿಎಸ್ ಮ್ಯಾಗ್ನೆಟ್ ಯೋಜನೆಯ ಹಿಂದೆ ಸರ್ಕಾರಿ ಶಾಲೆಗಳನ್ನು ಹಂತ ಹಂತವಾಗಿ ಮುಚ್ಚುವ ಹುನ್ನಾರ ಅಡಗಿದೆ ಎಂದು ಆರೋಪಿಸಿ ಪ್ರಗತಿಪರರು, ಶಿಕ್ಷಣ ತಜ್ಞರು ಹಾಗೂ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ಹಾದಿ ತುಳಿದಿದ್ದು, ಸರ್ಕಾರಿ ಶಾಲೆ ಉಳಿಸಿ ಆಂದೋಲನ ಆರಂಭಿಸಿದ್ದಾರೆ.

ರಾಜ್ಯದಲ್ಲಿ ಕಡಿಮೆ ದಾಖಲಾತಿ ಹೊಂದಿರುವ ಸರ್ಕಾರಿ ಶಾಲೆಗಳನ್ನು ಕೆಪಿಎಸ್ ಮ್ಯಾಗ್ನೆಟ್ ಶಾಲೆʼಗಳೊಂದಿಗೆ ವಿಲೀನಗೊಳಿಸುವ ರಾಜ್ಯ ಸರ್ಕಾರದ ಉದ್ದೇಶಿತ ಯೋಜನೆಗೆ ಶೈಕ್ಷಣಿಕ ವಲಯದಲ್ಲಿ ತೀವ್ರ ಪ್ರತಿರೋಧ ವ್ಯಕ್ತವಾಗಿದೆ.
ಖಾಸಗಿ ಶಾಲೆಗಳಂತೆ ಎಲ್‌ಕೆಜಿಯಿಂದ ಪಿಯುವರೆಗೆ ಒಂದೇ ಸೂರಿನಡಿ ಗುಣಮಟ್ಟದ ಶಿಕ್ಷಣ ಒದಗಿಸುವ ಕೆಪಿಎಸ್ ಮ್ಯಾಗ್ನೆಟ್ ಯೋಜನೆಯ ಹಿಂದೆ ಸರ್ಕಾರಿ ಶಾಲೆಗಳನ್ನು ಹಂತ ಹಂತವಾಗಿ ಮುಚ್ಚುವ ಹುನ್ನಾರ ಅಡಗಿದೆ ಎಂದು ಆರೋಪಿಸಿ ಪ್ರಗತಿಪರರು, ಶಿಕ್ಷಣ ತಜ್ಞರು ಹಾಗೂ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ಹಾದಿ ತುಳಿದಿದ್ದು, ಸರ್ಕಾರಿ ಶಾಲೆ ಉಳಿಸಿ ಆಂದೋಲನ ಆರಂಭಿಸಿದ್ದಾರೆ.

