LIVE | ಗ್ರೇಟರ್ ಬೆಂಗಳೂರು ಚುನಾವಣೆ: ಮೈತ್ರಿ ಬಗ್ಗೆ ಬಿ.ವೈ. ವಿಜಯೇಂದ್ರ ಮಹತ್ವದ ಘೋಷಣೆ

7 Feb 2026 4:49 PM IST

ಬೆಂಗಳೂರು: ಮುಂಬರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಚುನಾವಣೆಯನ್ನು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಮೈತ್ರಿ ಮಾಡಿಕೊಂಡು ಎದುರಿಸಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸ್ಪಷ್ಟಪಡಿಸಿದ್ದಾರೆ. ಚುನಾವಣಾ ಉಸ್ತುವಾರಿ ರಾಮ್ ಮಾಧವ್ ನೇತೃತ್ವದಲ್ಲಿ ನಡೆದ ಮಹತ್ವದ ಸಭೆಯ ಬಳಿಕ ಅವರು ಈ ವಿಷಯ ತಿಳಿಸಿದರು. ಜಿಬಿಎ ವ್ಯಾಪ್ತಿಯ 369 ವಾರ್ಡ್‌ಗಳಿಗೆ ಜೂನ್ 30ರ ಒಳಗೆ ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿರುವ ಹಿನ್ನೆಲೆಯಲ್ಲಿ, ಎರಡೂ ಪಕ್ಷಗಳು ಈಗಿನಿಂದಲೇ ಸಿದ್ಧತೆ ಆರಂಭಿಸಿವೆ. ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಒಗ್ಗಟ್ಟಿನಿಂದ ಸ್ಪರ್ಧಿಸಲಿದ್ದು, ವಾರ್ಡ್ ಹಂಚಿಕೆ ಮತ್ತು ಅಭ್ಯರ್ಥಿಗಳ ಆಯ್ಕೆ ಕುರಿತು ಜೆಡಿಎಸ್ ನಾಯಕರೊಂದಿಗೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ವಿಜಯೇಂದ್ರ ತಿಳಿಸಿದರು.