LIVE | ರೈತರ ಬೆಳೆಗಳಿಗೆ ನೀರು ಬಿಡುಗಡೆ ಮಾಡಲು ಆಗ್ರಹಿಸಿ ಪಾದಯಾತ್ರೆ ನಡೆಸಿದ ನಿಖಿಲ್ ಕುಮಾರಸ್ವಾಮಿ
ಟಿ.ಬಿ ಡ್ಯಾಂ ಗೇಟ್ ಅಳವಡಿಕೆ ವಿಳಂಬದಿಂದ ರೈತರ ಎರಡನೇ ಬೆಳೆಗೆ ನೀರು ನೀಡದಿರುವುದನ್ನು ಖಂಡಿಸಿ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಪಾದಯಾತ್ರೆ ನಡೆಸಲಾಯಿತು. ಟಿಬಿ ಡ್ಯಾಂ ಬಳಿ ಸುಮಾರು 3 ಕಿ.ಮೀ. ಪಾದಯಾತ್ರೆ ನಡೆಸಿದರು. ಭತ್ತಕ್ಕೆ ಬೆಂಬಲ ಬೆಲೆ ನೀಡಬೇಕು. ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸಬೇಕು ಎಂದು ಆಗ್ರಹಿಸಿದರು. ಎರಡನೇ ಬೆಳೆಗೆ ನೀರಿಲ್ಲದೇ ರೈತರಿಗೆ ನಷ್ಟವಾಗಿದೆ, ಪ್ರತಿ ಎಕರೆಗೆ 50 ಸಾವಿರ ಪರಿಹಾರಕ್ಕೆ ನಿಖಿಲ್ ಕುಮಾರಸ್ವಾಮಿ ಆಗ್ರಹಿಸಿದರು.


