LIVE | ಬೆಂಗಳೂರಿನಲ್ಲಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಮಹತ್ವದ ಸುದ್ದಿಗೋಷ್ಠಿ: ಹೈಲೈಟ್ಸ್

7 Feb 2026 5:23 PM IST

ಬೆಂಗಳೂರು: ಕೇಂದ್ರ ರೈಲ್ವೆ, ಮಾಹಿತಿ ಮತ್ತು ಪ್ರಸಾರ ಹಾಗೂ ಎಲೆಕ್ಟ್ರಾನಿಕ್ಸ್ ಸಚಿವರಾದ ಅಶ್ವಿನಿ ವೈಷ್ಣವ್ ಅವರು ಇಂದು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಮಹತ್ವದ ಪತ್ರಿಕಾಗೋಷ್ಠಿ ನಡೆಸಿದರು. ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕ ರಾಜ್ಯಕ್ಕೆ ದೊರೆತಿರುವ ಅನುದಾನಗಳು ಮತ್ತು ರೈಲ್ವೆ ಯೋಜನೆಗಳ ಬಗ್ಗೆ ಸಚಿವರು ಸಂಪೂರ್ಣ ಮಾಹಿತಿಯನ್ನು ನೀಡಿದರು. ಕಳೆದ ಕೆಲವು ವರ್ಷಗಳಲ್ಲಿ ಕರ್ನಾಟಕದಲ್ಲಿ ರೈಲ್ವೆ ಮೂಲಸೌಕರ್ಯ ಅಭಿವೃದ್ಧಿಗೆ ಕೇಂದ್ರ ಸರ್ಕಾರ ನೀಡುತ್ತಿರುವ ಆದ್ಯತೆಯನ್ನು ಸಚಿವರು ಅಂಕಿಅಂಶಗಳ ಸಹಿತ ವಿವರಿಸಿದರು. ಹಿಂದೆ ರಾಜ್ಯಕ್ಕೆ ಸಿಗುತ್ತಿದ್ದ ಅಲ್ಪ ಪ್ರಮಾಣದ ಅನುದಾನಕ್ಕೂ, ಪ್ರಸ್ತುತ ಮೋದಿ ಸರ್ಕಾರದ ಅವಧಿಯಲ್ಲಿ ಸಿಗುತ್ತಿರುವ ದಾಖಲೆ ಮಟ್ಟದ ಅನುದಾನಕ್ಕೂ ಇರುವ ವ್ಯತ್ಯಾಸವನ್ನು ಅವರು ಎತ್ತಿ ತೋರಿಸಿದರು.

ಬೆಂಗಳೂರು: ಕೇಂದ್ರ ರೈಲ್ವೆ, ಮಾಹಿತಿ ಮತ್ತು ಪ್ರಸಾರ ಹಾಗೂ ಎಲೆಕ್ಟ್ರಾನಿಕ್ಸ್ ಸಚಿವರಾದ ಅಶ್ವಿನಿ ವೈಷ್ಣವ್ ಅವರು ಇಂದು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಮಹತ್ವದ ಪತ್ರಿಕಾಗೋಷ್ಠಿ ನಡೆಸಿದರು. ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕ ರಾಜ್ಯಕ್ಕೆ ದೊರೆತಿರುವ ಅನುದಾನಗಳು ಮತ್ತು ರೈಲ್ವೆ ಯೋಜನೆಗಳ ಬಗ್ಗೆ ಸಚಿವರು ಸಂಪೂರ್ಣ ಮಾಹಿತಿಯನ್ನು ನೀಡಿದರು. ಕಳೆದ ಕೆಲವು ವರ್ಷಗಳಲ್ಲಿ ಕರ್ನಾಟಕದಲ್ಲಿ ರೈಲ್ವೆ ಮೂಲಸೌಕರ್ಯ ಅಭಿವೃದ್ಧಿಗೆ ಕೇಂದ್ರ ಸರ್ಕಾರ ನೀಡುತ್ತಿರುವ ಆದ್ಯತೆಯನ್ನು ಸಚಿವರು ಅಂಕಿಅಂಶಗಳ ಸಹಿತ ವಿವರಿಸಿದರು. ಹಿಂದೆ ರಾಜ್ಯಕ್ಕೆ ಸಿಗುತ್ತಿದ್ದ ಅಲ್ಪ ಪ್ರಮಾಣದ ಅನುದಾನಕ್ಕೂ, ಪ್ರಸ್ತುತ ಮೋದಿ ಸರ್ಕಾರದ ಅವಧಿಯಲ್ಲಿ ಸಿಗುತ್ತಿರುವ ದಾಖಲೆ ಮಟ್ಟದ ಅನುದಾನಕ್ಕೂ ಇರುವ ವ್ಯತ್ಯಾಸವನ್ನು ಅವರು ಎತ್ತಿ ತೋರಿಸಿದರು